ಸಲಿಂಗ ಕಾಮ,ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಶಾಸಕ,ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.
ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಬೆಸಗಿದ ಆರೋಪದ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದ ಹೊಳೆನರಸೀಪುರ ಠಾಣೆಯ ಪೋಲಿಸರು ಸೂರಜ್ ರೇವಣ್ಣನನ್ನು ಇಂದು ರಾತ್ರಿ ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.ಅವರು ಸೂರಜ್ ರೇವಣ್ಣನಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದು,ಆತನನ್ನು ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಯಿತು.
ಹಲವು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ ಆರೋಪದ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣನ ನಂತರ ಆತನ ಸಹೋದರ ಸೂರಜ್ ರೇವಣ್ಣ ಕೂಡಾ ಪರಪ್ಪನ ಅಗ್ರಹಾರ ಜೈಲು ಸೇರಿರುವುದು ಎಚ್.ಡಿ.ರೇವಣ್ಣ ಕುಟುಂಬಕ್ಕೆ ಮುಜುಗರ ತಂದಿದೆ.