Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ‘ಜನಸ್ಪಂದನ’ ಸಭೆಯಲ್ಲಿ ಜನರ ಸಮಸ್ಯೆಗೆ ಪರಿಹಾರ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿ ಕೇಂದ್ರದಲ್ಲಿ ಜನಸ್ಪಂದನ ಸಭೆ ನಡೆಸಿ ಶ್ರೀ ಸಾಮಾನ್ಯರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಟ್ಟ ಶಾಸಕ ಹೆಚ್.ಟಿ.ಮಂಜು.

ನೂರಾರು ಗ್ರಾಮಸ್ಥರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗಿಯಾಗಿ ಜಿಲ್ಲಾಧಿಕಾರಿ ಡಾ. ಕುಮಾರ ಮತ್ತು ಜಿಲ್ಲಾ ಪಂಚಾಯತ್ ಸಿಇಓ ಶೇಕ್ ತನ್ವಿರ್ ಆಸೀಫ್ ಅವರಿಗೆ ಮನವಿ ಸಲ್ಲಿಸಿ ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಂಡ ರೈತ ಭಾಂದವರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಡಲಾಗುತ್ತಿದೆ.

ಜಿಲ್ಲಾಧಿಕಾರಿ ಸೇರಿದಂತೆ ಇಡೀ ತಾಲ್ಲೂಕು ಆಡಳಿತವೇ ಇಂದು ಬೂಕನಕೆರೆ ಹೋಬಳಿ ಕೇಂದ್ರಕ್ಕೆ ಆಗಮಿಸಿ ಶ್ರೀಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಯಾವುದೇ ಮದ್ಯವರ್ತಿಗಳ ಹಾವಳಿ ಇಲ್ಲದಂತೆ ನೇರವಾಗಿ ರೈತರ ಸಮಸ್ಯೆ ಆಲಿಸಿ ಪರಿಹಾರ ನೀಡಿದೆ ಎಂದು ಹೇಳಿದ ಶಾಸಕರು ಭ್ರಷ್ಟ ಅಧಿಕಾರಿಗಳು ಹಾಗೂ ಬಡ ಜನರಿಗೆ ತೊಂದರೆ ನೀಡುವ ಅಧಿಕಾರಿಗಳಿಗೆ ನನ್ನ ತಾಲ್ಲೂಕಿನಲ್ಲಿ ಜಾಗವಿಲ್ಲ. ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಬಡಜನರ ನೋವಿಗೆ ಧನಿಯಾಗಬೇಕು. ವಿನಾಕಾರಣ ಶ್ರೀ ಸಾಮಾನ್ಯರನ್ನು ಕಛೇರಿಗೆ ಅಲೆದಾಡಿಸುವ ಲಂಚಕೋರ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಕ್ರಮ ಕೈಗೊಳ್ಳಲು ನಾನೇ ಸರ್ಕಾರಕ್ಕೆ ಪತ್ರಬರೆಯುತ್ತೇನೆ ಎಂದು ಶಾಸಕ ಮಂಜು ಎಚ್ಚರಿಸಿದರು.

ಪಾಂಡವಪುರ ಉಪ ವಿಭಾಗಧಿಕಾರಿ ನಂದೀಶ್, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಸತೀಶ್ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಹೂವು ಮತ್ತು ಹಣ್ಣಿನ ಗಿಡಗಳನ್ನು ವಲಯ ಅರಣ್ಯಧಿಕಾರಿ ಅನಿತಾ ಪ್ರವೀಣ್ ಹಾಗೂ ಶೈಲೆಂದ್ರಕುಮಾರ್ ವಿತರಿಸಿದರು. ವಿವಿಧ ಇಲಾಖೆಗಳ ಸಾಧನ ಸಲಕರಣೆಗಳನ್ನು ಶಾಸಕರು ಅರ್ಹ ಫಲಾನುಭವಿಗಳಿಗೆ ವಿತರಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!