Friday, September 20, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಜನಸ್ಪಂದನ ಕಾರ್ಯಕ್ರಮ ಸದುಪಯೋಗಪಡಿಸಿಕೊಳ್ಳಿ: ಕೆ.ಎಂ.ಉದಯ್

ಜನ ಸಾಮಾನ್ಯರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲು ಸರ್ಕಾರವು ಇಂದು ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಆಯೋಜಿಸುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಮ್.ಉದಯ್ ತಿಳಿಸಿದರು.

ಮದ್ದೂರು ತಾಲೂಕಿನ ಭಾರತೀನಗರ ಬಾಲಾಜಿ ಸಮುದಾಯ ಭವನದಲ್ಲಿ ಇಂದು ನಡೆದ ಜನ ಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳಿಂದಾಗಿ ನೂರಾರು ಸಂಖ್ಯೆಯಲ್ಲಿ ಅರ್ಜಿಗಳನ್ನು ಹಿಡಿದು ನಾಡ ಕಛೇರಿ ಹಾಗೂ ತಾಲ್ಲೂಕು ಕಚೇರಿಗಳಿಗೆ ಅಲೆಯುತ್ತಿದ್ದಾರೆ. ಇದನ್ನು ತಪ್ಪಿಸುವ ಸಲುವಾಗಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ರೈತರಿಗೆ ಪಶು ಸಂಗೋಪನೆ, ತೋಟಗಾರಿಕೆ, ಕೃಷಿ, ರೇಷ್ಮೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿ ಸರ್ಕಾರ ಸೌಲಭ್ಯಗಳನ್ನು ಒದಗಿಸುತ್ತದೆ. ಅಧಿಕಾರಿಗಳು ರೈತರಿಗೆ ಮಾಹಿತಿ ನೀಡಿ ಸೌಲಭ್ಯವನ್ನು ಪಾರದರ್ಶಕವಾಗಿ ಒದಗಿಸಿ ಎಂದು ತಿಳಿಸಿದರು.

ರೈತರ ಸಮಸ್ಯೆಗಳಿಗೆ ಅಧಿಕಾರಿಗಳು ಅಸಡ್ಡೆ ತೋರಬಾರದು:ಮಧು ಜಿ ಮಾದೇಗೌಡ

ವಿಧಾನ ಪರಿಷತ್ ಶಾಸಕ ಮಧು ಜಿ ಮಾದೇಗೌಡ ಮಾತನಾಡಿ, ರೈತರು ತಮ್ಮ ಕೃಷಿ ಚಟುವಟಿಕೆಗಳೊಂದಿಗೆ ತಮಗೆ ಇರುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳಿಗೆ ಅಸಡ್ಡೆ ತೋರದೆ ಕೆಲಸಗಳನ್ನು ಶೀಘ್ರವಾಗಿ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಅಧಿಕಾರಿಗಳಿಂದ ಮಾತ್ರ ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಸಾಧ್ಯವಾಗುವುದಿಲ್ಲ. ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈ ಜೋಡಿಸಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಾಗ ಮಾತ್ರ ಬಗೆಹರಿಸಲು ಸಾಧ್ಯ ಎಂದರು.

ಅಧಿಕಾರಿಗಳೇ ಜನರ ಹಿಂದೆ ಸುತ್ತಬೇಕು:ಡಾ.ಕುಮಾರ್

ಜನರು ತಮ್ಮ ಕೆಲಸಕ್ಕಾಗಿ ಅಧಿಕಾರಿಗಳ ಹಿಂದೆ ಶಾಸಕರ ಹಿಂದೆ ಸುತ್ತಾಡುವುದು ಅವರಿಗಾಗಿ ಕಾಯುವುದನ್ನು ನಾವು ನೋಡಿದ್ದೇವೆ ಇನ್ನು ಮುಂದೆ ಇದೆಲ್ಲ ನಡೆಯಬಾರದು ಅಧಿಕಾರಿಗಳೇ ಸಾರ್ವಜನಿಕರ ಹಿಂದೆ ಸುತ್ತಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು.

ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಜನ ಸ್ಪಂದನ ಕಾರ್ಯಕ್ರಮವನ್ನು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಯೋಜಿಸುತ್ತಿದ್ದೇವೆ. ಮೊದಲ ಹಂತದಲ್ಲಿ ತಾಲೂಕು ಕೇಂದ್ರಗಳಲ್ಲಿ ಎರಡನೇ ಹಂತದಲ್ಲಿ ಹೋಬಳಿ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಅಧಿಕಾರಿಗಳು ಹಾಜರಿದ್ದು ಸಾರ್ವಜನಿಕರ ದೂರುಗಳನ್ನು ಆಲಿಸಬೇಕು ಸಮಸ್ಯೆಗಳನ್ನು ಪರಿಹರಿಸಬೇಕು ಪರಿಹಾರವಿಲ್ಲದ ಸಮಸ್ಯೆಗಳು ಇರುವುದಿಲ್ಲ ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದ್ದೆ ಇದೆ ಎಂದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಹಾಗೂ ರೈತರಿಗೆ ಕೃಷಿ ಇಲಾಖೆ ವತಿಯಿಂದ ಸವಲತ್ತು ಹಾಗೂ ಕರಪತ್ರ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಲ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!