Tuesday, November 24, 2026

ಪ್ರಾಯೋಗಿಕ ಆವೃತ್ತಿ

ಉತ್ತರ ಪ್ರದೇಶ| ಕಾಲ್ತುಳಿತಕ್ಕೆ ಬಲಿಯಾದವರ ಕುಟುಂಬಗಳನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದಾರೆ.

ಶುಕ್ರವಾರ ಮುಂಜಾನೆ ದೆಹಲಿಯಿಂದ ಹತ್ರಾಸ್‌ಗೆ ರಸ್ತೆ ಮೂಲಕ ಅಲಿಗಢ್‌ನ ಪಿಲಾಖ್ನಾ ಗ್ರಾಮಕ್ಕೆ ರಾಹುಲ್‌ ಗಾಂಧಿ ತೆರಳಿದರು. ವಿಪಕ್ಷ ನಾಯಕರ ಜೊತೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ, ಪಕ್ಷದ ವಕ್ತಾರ ಸುಪ್ರಿಯಾ ಶ್ರೀನಾಥೆ ಮತ್ತು ಇತರ ಪದಾಧಿಕಾರಿಗಳು ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ, ರಾಹುಲ್ ಗಾಂಧಿ ಅವರು ಇಂದು ಹತ್ರಾಸ್‌ನಲ್ಲಿ ಮೃತಪಟ್ಟ ವಿವಿಧ ಗ್ರಾಮಗಳಲ್ಲಿರುವ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವಾನ ಹೇಳಲಿದ್ದಾರೆ. ಹತ್ರಾಸ್ ಘಟನೆಯು ಉತ್ತರ ಪ್ರದೇಶ ಸರ್ಕಾರದ ವೈಫಲ್ಯವಾಗಿದೆ. ನಿನ್ನೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹತ್ರಾಸ್‌ಗೆ ಭೇಟಿ ನೀಡಿದ್ದರು. ನಂತರ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಕೂಡ ಅಲ್ಲಿಗೆ ಹೋಗಿದ್ದರು. ಆದರೆ ಇಬ್ಬರು ಒಟ್ಟಿಗೆ ಹೋಗಲಿಲ್ಲ. ಇದು ಸರ್ಕಾರದ ಆಂತರಿಕ ಕಚ್ಚಾಟವನ್ನು ತೋರಿಸುತ್ತದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹತ್ರಾಸ್‌ನಲ್ಲಿ ಜುಲೈ 2 ರಂದು ಸತ್ಸಂಗದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಸಾವನ್ನಪ್ಪಿದ 121 ಜನರಲ್ಲಿ 17 ಮಂದಿ ಅಲಿಗಢದವರು ಮತ್ತು 19 ಜನರು ಹತ್ರಾಸ್‌ನವರಾಗಿದ್ದಾರೆ.

“>

ದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಸತ್ಸಂಗ ಹಮ್ಮಿಕೊಳ್ಳಲಾದ ಆಯೋಜನೆಯ ಸದಸ್ಯರಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ನಾರಾಯಣ್‌ ಸಾಕಾರ್‌ ಹರಿ ಎಂಬಾತ ಹಮ್ಮಿಕೊಂಡಿದ್ದ ಸತ್ಸಂಗದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಬಹುತೇಕ ಮಹಿಳೆಯರನ್ನು ಒಳಗೊಂಡು ಒಟ್ಟು 121 ಮಂದಿ ಮೃತಪಟ್ಟು, 31 ಮಂದಿ ಗಾಯಗೊಂಡಿದ್ದರು.

ಅಲಿಘಢ ಐಜಿ ಶಲಭ್‌ ಮಾತೂರ್‌ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಒಳಗೊಂಡು 6 ಮಂದಿಯನ್ನು ಬಂಧಿಸಲಾಗಿದೆ. ಎಲ್ಲ ಸದಸ್ಯರು ಸಂಘಟನಾ ಸಮಿತಿ ಹಾಗೂ ಸೇವಾದಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿಸಿದ್ದಾರೆ.

ಈ ನಡುವೆ ಮುಖ್ಯ ಸೇವದಾರನಾದ ದೇವ್‌ ಪ್ರಕಾಶ್‌ ಮಧುಕರ್‌ ಎಂಬಾತನನ್ನು ಮುಖ್ಯ ಆರೋಪಿ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಈತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಲಾಗಿದ್ದು, ಮಧುಕರ್‌ ಬಗ್ಗೆ ಸುಳಿವು ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಮಾತೂರ್‌ ತಿಳಿಸಿದ್ದಾರೆ.

ಸತ್ಸಂಗದಲ್ಲಿ 2.50 ಲಕ್ಷ ಮಂದಿ ಭಾಗಿಯಾಗಿದ್ದು, ಜಿಲ್ಲಾಡಳಿತ 80 ಸಾವಿರ ಜನರಿಗಷ್ಟೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ