Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| 11 ಜನ ಜೂಜುಕೋರರ ಬಂಧನ: ₹49 ಸಾವಿರ ಹಣ ವಶ

ಮಳವಳ್ಳಿ ಪಟ್ಟಣದ ಸುಲ್ತಾನ್ ರಸ್ತೆಯ ಹಳೇ ಟಾಕೀಸ್ ಸಮೀಪವಿರುವ ಜೂಜು ಅಡ್ಡೆಯ ಮೇಲೆ ಶನಿವಾರ ಸಂಜೆ ದಾಳಿ ನಡೆಸಿರುವ ಪೊಲೀಸರು 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಟಾಕೀಸ್ ಸಮೀಪ ಜೂಜು ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಮಳವಳ್ಳಿ ಪಟ್ಟಣದ ಪೊಲೀಸ್ ಠಾಣೆಯ ಸಿಪಿಐ ಎಂ.ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು 11 ಜನರನ್ನು ಬಂಧಿಸಿ 49,000 ರೂ.ಗಳನ್ನು ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಹಲವು ಸಿಬ್ಬಂದಿಗಳು ಭಾಗಿಯಾಗಿದ್ದರು. ಈ ಸಂಬಂಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!