Thursday, September 19, 2024

ಪ್ರಾಯೋಗಿಕ ಆವೃತ್ತಿ

ಚುನಾವಣೆ ಹಿನ್ನಲೆ: ಪ್ರತಿಬಂಧಕಾಜ್ಞೆ ಆದೇಶ ಜಾರಿ

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ 2022ರ ಸಂಬಂಧ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಜೂನ್ 13 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಸಿ.ಆರ್.ಪಿ.ಸಿ 1973 ಕಲಂ 144 ಕರ್ನಾಟಕ ಪೋಲೀಸ್ ಕಾಯ್ದೆ 1863 ರ ಕಲಂ 35 ಅಡಿ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಇಂದು ಜೂನ್ 11ರ ಸಂಜೆ 5ಗಂಟೆಯಿಂದ ಜೂನ್ 13ರ ಸಂಜೆ 5 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಸುಗಮವಾಗಿ ಚುನಾವಣೆ ನಡೆಸಲು ಈಗಾಗಲೇ ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯ ಕಟ್ಟೆಚ್ಚರ ವಹಿಸಿದ್ದು ಜಿಲ್ಲೆಯಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!