ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಯುವ ಪತ್ರಕರ್ತ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ಪಟ್ಟಣದ ಮಳವಳ್ಳಿಯ ರಸ್ತೆಯಲ್ಲಿ ನಡೆದಿದೆ.
ಮದ್ದೂರು ತಾಲೂಕಿನ ಬೆಸಗರಹಳ್ಳಿ ಲೇ.ಆರ್.ಮುರುಗನ್ ಅವರ ಪುತ್ರ ಬಿ.ಎ ಮಧುಕುಮಾರ್ (32)ಮೃತ ಪಟ್ಟವರು.
ಮೃತ ಮಧುಕುಮಾರ್ ಪಟ್ಟಣದ ಮಳವಳ್ಳಿ ಮಾರ್ಗದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಮಧುಕುಮಾರ್ ಅವರನನ್ನು ಮದ್ದೂರು ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದ ವೇಳೆ ಚಿಕಿತ್ಸೆ ಫಲಕಾರಿಯಾಗಿದೆ ತಡರಾತ್ರಿ ಮೃತಪಟ್ಟಿದ್ದಾರೆ.
ಈ ಸಂಬಂಧ ಸಹೋದರ ನೀಡಿದ ದೂರಿನ ಮೇರೆಗೆ ಮದ್ದೂರು ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾಸುದಾರರಿಗೆ ಒಪ್ಪಿಸಲಾಯಿತು. ಭಾನುವಾರ ಸ್ವಗ್ರಾಮ ಬೆಸಗರಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿತು. ಮೃತನಿಗೆ ಪತ್ನಿ ದೀಪಾ ಹಾಗೂ 4 ವರ್ಷದ ಪ್ರಬುದ್ಧ ಎಂಬ ಪುತ್ರನಿದ್ದಾನೆ.
3 ವರ್ಷಗಳ ಕಾಲ ಕೊಪ್ಪ ಹೋಬಳಿಯ ಪ್ರಜಾವಾಣಿ ಪತ್ರಿಕೆ ವರದಿಗಾರರಾಗಿ ಬಳಿಕ ಪ್ರಸ್ತುತ ಪ್ರತಿನಿಧಿ ಪತ್ರಿಕೆ ತಾಲೂಕು ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.




