Tuesday, November 24, 2026

ಪ್ರಾಯೋಗಿಕ ಆವೃತ್ತಿ

ಎಸ್ಸಿಎಸ್ಪಿ- ಟಿಎಸ್ಪಿ ಹಣ ದುರ್ಬಳಕೆ: ಸಿಎಂ ರಾಜೀನಾಮೆಗೆ ಆಗ್ರಹ

ದಲಿತರಿಗೆ ಮೀಸಲಿಟ್ಟಿರುವ ಸಾವಿರಾರು ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆ ನೆಪದಲ್ಲಿ ಬೇರೆ ಯೋಜನೆಗಳಿಗೆ ಬಳಸಿಕೊಂಡು ದಲಿತರನ್ನು ನಯವಾಗಿ ವಂಚಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟ ಗಿರಿಯಯ್ಯ ಆಗ್ರಹಪಡಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದ 25,282 ಕೋಟಿ ರೂಪಾಯಿಗಳನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾಯಿಸಿ ರಾಜ್ಯ ಸರ್ಕಾರ ದುರ್ಬಳಕೆ ಮಾಡುತ್ತಿದೆ ಮತ್ತು ಬಹುಕೋಟಿ ಭ್ರಷ್ಟಾಚಾರ ಪ್ರಕರಣಗಳು ನಡೆದಿದ್ದು ಇದರ ನೈತಿಕ ಹೊಣೆಯನ್ನು ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಕಳೆದ ಸಾಲಿನಲ್ಲಿ 11,000 ಕೋಟಿ ಎಸ್‌ಸಿಎಸ್ಪಿ ಮತ್ತು ಟಿ ಎಸ್ ಪಿ ಹಣ, ಪ್ರಸ್ತುತ ಸಾಲಿನಲ್ಲಿ 14,000 ಎಸ್‌ಸಿ ಎಸ್ಪಿ ಮತ್ತು ಟಿ ಎಸ್ ಪಿ ಅನುದಾನವನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿರುವುದು ಜಗಜ್ಜಾರಾಗಿದೆ ಎಂದು ದೂರಿದರು.

ದಲಿತರಿಗೆ ಈ ಹೊರಗುತ್ತಿಗೆಗಳ ಹುದ್ದೆಗಳು ಸಿಗದ ಪರಿಣಾಮ ಮುಖ್ಯಮಂತ್ರಿಗಳು ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ ಮಾಡಿ ಆದೇಶಿಸಿದ್ದಾರೆ. ಆದರೆ ಈ ಸುತ್ತೋಲೆಯಲ್ಲಿ ಹೊರಗುತ್ತಿಗೆ ನೇಮಕಾತಿ 45 ದಿನಗಳಿಗಿಂತ ಕಡಿಮೆ ಅವಧಿ ನೇಮಕಾತಿಗೆ ಅನ್ವಯಿಸುವುದಿಲ್ಲ. ಆದಕಾರಣ ನೌಕರಿಯಲ್ಲಿ ಹೊರಗುತ್ತಿಗೆಯನ್ನು ರದ್ದುಪಡಿಸಿ ನೇರ ನೇಮಕಾತಿ ಮಾಡಬೇಕು .ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ದಸಂಸ ಜಿಲ್ಲಾಧ್ಯಕ್ಷ ಆನಂದ್, ಉಪಾಧ್ಯಕ್ಷ ಮರಂಕಯ್ಯ, ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಸುರೇಶ್ ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ