Friday, September 20, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ಕರಡಹಳ್ಳಿ ಗ್ರಾ.ಪಂ ಸದಸ್ಯ ಸಿದ್ದಲಿಂಗಪ್ಪ ಅನರ್ಹ

ನಾಗಮಂಗಲ ತಾಲೂಕಿನ ಕರಡಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಲಿಂಗಪ್ಪ ಅವರನ್ನು ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ನಾಗಮಂಗಲದ ರಾಮಣ್ಣ ತಿಳಿಸಿದರು.

ಮಂಡ್ಯದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಡಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಲಿಂಗಪ್ಪ ಅವರನ್ನು ಭ್ರಷ್ಟಾಷಾರ ನಡೆಸಿದ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅದಿನಿಯಮ 1993 ಪ್ರಕರಣ 43 ಎ ಅಡಿ ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ಅನರ್ಹ ಮಾಡಲಾಗಿದೆ. ನಿಯಮ 12ಎಲ್ ಅನ್ವಯ 6 ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಸಿದ್ದಲಿಂಗಪ್ಪ ತಮ್ಮ ಕಡೆಯವರಿಗೆ ಕಾಮಗಾರಿಗಳ ಗುತ್ತಿಗೆಯನ್ನು ಕೊಡಿಸಿ ಅವ್ಯವಹಾರ ನಡೆಸುತ್ತಿದ್ದರು. ಅಲ್ಲದೆ ಕಳಪೆ ಕಾಮಗಾರಿ ಮಾಡಿ ವಂಚನೆ ಮಾಡಿದ್ದರು. ಈ ಬಗ್ಗೆ ಪಂಚಾಯತ್ ರಾಜ್ ಇಲಾಖೆಗೆ ದೂರು ನೀಡಲಾಗಿತ್ತು ಎಂದರು.

ಸಿದ್ದಲಿಂಗಪ್ಪ ವಿರುದ್ದ ಕಾನೂನು ಕ್ರಮ ಜರುಗಿಸಿರುವುದು ಸ್ವಾಗತಾರ್ಹ, ಅದೇ ರೀತಿ ಇವರೊಂದಿಗೆ ಅಧಿಕಾರಿಗಳು ಕೂಡ ಶಾಮೀಲಾಗಿದ್ದು, ಹಣ ಬಿಡುಗಡೆ ಮಾಡಲು ಬಿಲ್ಲುಗಳಿಗೆ ಸಹಿ ಹಾಕಿದ್ದಾರೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ಇದೆ. ಅಂತಹ ಅಧಿಕಾರಿಗಳ ವಿರುದ್ಧವು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಭಗವಾನ್ ಚಕ್ರವರ್ತಿ, ಗಿರೀಶ್ ಹಾಗೂ ಭಗತ್ ಸಿಂಗ್ ಅರುಣ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!