Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಹೊರ ವರ್ತುಲ ರಸ್ತೆ ಯೋಜನೆ| ಕೇಂದ್ರ ಸಾರಿಗೆ-ಹೆದ್ಧಾರಿ ಸಚಿವ ಗಡ್ಕರಿ ಗಮನ ಸೆಳೆದ ಹೆಚ್.ಡಿ.ಕುಮಾರಸ್ವಾಮಿ

ಕೇಂದ್ರ ಸಾರಿಗೆ-ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿಯಾದ ಮಂಡ್ಯ ಸಂಸದ ಹಾಗೂ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.

ಕರ್ನಾಟಕದಲ್ಲಿ ಬಾಕಿ ಇರುವ ಹೆದ್ದಾರಿ ಯೋಜನೆಗಳನ್ನು ಶೀಘ್ರವೇ ಕಾರ್ಯಗತಗೊಳಿಸಿವುದು ಹಾಗೂ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವಿ ಸಲ್ಲಿಸಿದರು.

ಮಂಡ್ಯ ನಗರದ ಹೊರ ವರ್ತುಲ ರಸ್ತೆ ಹಾಗೂ ಹಲಗೂರು – ಕೆ.ಎಂ.ದೊಡ್ಡಿ ರಸ್ತೆಯನ್ನು ಮೇಲ್ದರ್ಜೆಗೇರಿಸಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಯೋಜನೆಯ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಿದರು ಎಂದು ತಿಳಿದು ಬಂದಿದೆ.

ಸಾರಿಗೆ ಸಚಿವರು, ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು, ಈ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಕೋಲಾರ ಸಂಸದರಾದ ಮಲ್ಲೇಶ್ ಬಾಬು ಅವರು ಈ ಸಂದರ್ಭದಲ್ಲಿ ಸಚಿವರ ಜತೆಯಲ್ಲಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!