Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಿಐಡಿಯಿಂದ ಬಿಜೆಪಿ ನಾಯಕ ಡಿ.ಎಸ್.ವೀರಯ್ಯ ಅರೆಸ್ಟ್

ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

2021ರಿಂದ 2023ರವರ ಅವಧಿಯಲ್ಲಿ ಡಿಡಿಯುಟಿಟಿಎಲ್ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ್ ದೂರು ನೀಡಿದ್ದರು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಇದೀಗ ಮಾಜಿ ಶಾಸಕ ವೀರಯ್ಯ ಅವರನ್ನು ಬಂಧಿಸಿದೆ.

2021ರಿಂದ 2023ರವರ ಅವಧಿಯಲ್ಲಿ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 47.10 ಕೋಟಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತುಂಡು ಗುತ್ತಿಗೆ ಆಧಾರದಲ್ಲಿ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಸೆ.23ರಂದು ಎಫ್ ಐಆರ್ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!