Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯದಲ್ಲಿ ಕನ್ನಡ ನುಡಿ ಜಾತ್ರೆ| ಸಚಿವರಿಂದ 3 ಕಡೆ ಸ್ಥಳ ಪರಿಶೀಲನೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಯಲಿದ್ದು, ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಭಾನುವಾರ ಮಂಡ್ಯನಗರ ಹೊರ ವಲಯದ ಎರಡು ಕಡೆಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಮಂಡ್ಯ ಜಿಲ್ಲಾಡಳಿತ ಅಮರಾವತಿ ಹೋಟೆಲ್ ಹಿಂಭಾಗ, ಚಿಕ್ಕಮಂಡ್ಯ ಕೆರೆಯಂಗಳ ಮತ್ತು ಬೈಪಾಸ್ ಸಮೀಪದ ಒಂದು ಸ್ಥಳ ಸೇರಿದಂತೆ 3 ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಸದ್ಯದಲ್ಲೇ ಒಂದು ಸ್ಥಳವನ್ನು ನಿಗದಿ ಮಾಡಲಾಗುವುದು ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಣೆ ಮಾಡುವುದಕ್ಕೆ ರಾಜ್ಯ ಸಮಿತಿ ಜಿಲ್ಲಾ ಸಮಿತಿ ಎಲ್ಲಾ ಒಟ್ಟಾಗಿ ಸಭೆ ನಡೆಸಿ ಡಿಸೆಂಬರ್ 21,22,23 ರಂದು ನಡೆಸಲು ತೀರ್ಮಾನಿಸಲಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ಆಚರಣೆಗೆ ಬರುವುದಕ್ಕೆ ಜನರಿಗೆ ಯಾವುದೇ ತರಹ ತೊಂದರೆ ಆಗಬಾರದು ಎಂದು ಡಿಸೆಂಬರ್ ಮಾಹೆಯಲ್ಲಿ ಮಳೆಗಾಲ ಇಲ್ಲದಿರುವಾಗ ಮತ್ತು ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬೇಕು ಎಂಬ ಉದ್ದೇಶದಿಂದ ಡಿಸೆಂಬರ್ ಮಾಹೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಂಡ್ಯ ನಗರದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಹಾಗೂ ಚಿಕ್ಕಮಂಡ್ಯ ಕೆರೆಯಂಗಳದಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸುವ ಸಂಬಂಧ ಸ್ಥಳ ಪರಿಶೀಲನೆ ನಡೆಸಿದರು. ಪರಿಶೀಲನೆಯ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!