Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜಿಲ್ಲಾ ಕಸಾಪ ಕಾರ್ಯಕಾರಿ ಸಮಿತಿ ಗೌರವ ಕಾರ್ಯದರ್ಶಿಯಾಗಿ ವಿ.ಹರ್ಷ ನೇಮಕ

ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕಳೆದ ಎರಡು ಅವಧಿಯ ಅಧ್ಯಕ್ಷರಾಗಿದ್ದ ಸಿ.ಕೆ. ರವಿಕುಮಾರ ಚಾಮಲಾಪುರ ನಿಧನದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿಗೆ ಗೌರವ ಕಾರ್ಯದರ್ಶಿಯನ್ನಾಗಿ ಮದ್ದೂರು ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ ವಿ.ಹರ್ಷ ಅವರನ್ನು ನಾಮನಿರ್ದೇಶನ ಮಾಡಿ ಕೇಂದ್ರ ಕಸಾಪ ಅಧ್ಯಕ್ಷ ಡಾ.ಮಹೇಶ ಜೋಷಿ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಗೊತ್ತುಪಡಿಸಲಾಗಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21, ಮತ್ತು 22ರಂದು ಮಂಡ್ಯದಲ್ಲಿ ಜರುಗುವುದರಿಂದ ಜಿಲ್ಲೆಯಲ್ಲಿ ಚಟುವಟಿಕೆಗಳು ತತಕ್ಷಣದಿಂದ ನಡೆಯಬೇಕಾಗಿರುವುದರಿಂದ ಕಾರ್ಯಕಾರಿ ಸಮಿತಿ ಗೌರವ ಕಾರ್ಯದರ್ಶಿಯಾಗಿ ಹರ್ಷ ಅವರನ್ನು ನೇಮಕ ಮಾಡಲಾಗಿದೆ.

ಪರಿಷತ್ತಿನ ಅನುಮೋದಿತ ತಿದ್ದುಪಡಿ ನಿಬಂಧನೆ ೩೩(೨)(ಅ)ರಂತೆ “ಸಮ್ಮೇಳನ ಜರುಗಲಿರುವ ಜಿಲ್ಲೆಯ ಚುನಾಯಿತ ಅಧ್ಯಕ್ಷರ ಸ್ಥಾನ ಯಾವುದೇ ಕಾರಣದಿಂದಾಗಿ ತೆರವಾಗಿದ್ದಲ್ಲಿ ಅಥವಾ ಜಿಲ್ಲಾಧ್ಯಕ್ಷರು ಆರೋಗ್ಯ ಸಮಸ್ಯೆಯ ಕಾರಣದಿಂದಾಗಿ ಅಥವಾ ಮತ್ತಾವುದೇ ಕಾರಣದಿಂದಾಗಿ ಸಮ್ಮೇಳನದ ಪೂರ್ವಸಿದ್ಧತೆಗಳನ್ನು ಒಳಗೊಂಡಂತೆ ಎಲ್ಲ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಮರ್ಥರಾಗಿಲ್ಲದ ಪಕ್ಷದಲ್ಲಿ, ಅವರು ನಿಯಮಗಳನುಸಾರ ನಿರ್ವಹಿಸಬೇಕಾದ ಎಲ್ಲ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲಿಕ್ಕಾಗಿ ಕೇಂದ್ರ ಪರಿಷತ್ತಿನ ಅಧ್ಯಕ್ಷರು ಸಮಿತಿಯೊಂದನ್ನು ರಚಿಸಿ, ಆ ಸಮಿತಿಯು ಅವರ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸಬೇಕಾಗಿರುತ್ತದೆ. ಅದರಂತೆ ಕಾರ್ಯಕಾರಿ ಸಮಿತಿಗೆ ಗೌರವ ಕಾರ್ಯದರ್ಶಿಯ ನೇಮಕ ನಡೆದಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ