Friday, November 20, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ: ಹೆಚ್.ಟಿ ಮಂಜು

ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೆ. ಆರ್.ಪೇಟೆಯಲ್ಲಿ ಅಭಿನಂದನೆ ಸಮಾರಂಭ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಮಾಜಿ ಸಚಿವ ನಾರಾಯಣಗೌಡ ಹಾಗೂ ಶಾಸಕ ಹೆಚ್.ಟಿ. ಮಂಜು ತಾಲೂಕಿನ ಹೋಬಳಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸಭೆ ನಡೆಸಿ ಕಾರ್ಯಕ್ರಮದ ಯಶಸ್ಸಿಗೆ ಮನವಿ ಮಾಡಿದರು.

ಜುಲೈ 21ರಂದು ಕೃಷ್ಣರಾಜಪೇಟೆ ಪಟ್ಟಣದಲ್ಲಿ ಕೇಂದ್ರ ಸಚಿವ ಜೆಡಿಎಸ್ ಸರ್ವೋಚ್ಚ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅಭಿನಂದನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಸಂತೆಬಾಚಹಳ್ಳಿ, ಶೀಳನೆರೆ, ಬೂಕನಕೆರೆ, ಅಕ್ಕಿಹೆಬ್ಬಾಳು, ಕಿಕ್ಕೇರಿ ಹಾಗೂ ಹೊಸಹೊಳಲು ಗ್ರಾಮಗಳಲ್ಲಿ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಲಾಯಿತು.

ಡಾ.ನಾರಾಯಣ ಗೌಡ ಮಾತನಾಡಿ, ಮಂಡ್ಯ ಲೋಕಸಭಾ ಚುನಾವಣೆಯ ಇತಿಹಾಸದಲ್ಲಿ ಎರಡೂವರೇ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ವಿಜಯಮಾಲೆ ತೊಡಿಸಿ ಇತಿಹಾಸ ನಿರ್ಮಿಸಿರುವ ಮಂಡ್ಯ ಜಿಲ್ಲೆಯ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಸರ್ಕಾರವು ನೀಡಿರುವ ಬಿಟ್ಟಿ ಭಾಗ್ಯಗಳನ್ನು ಸಾರ ಸಗಟಾಗಿ ತಿರಸ್ಕರಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಕಹಿ ಉಣಿಸುವ ಜೊತೆಗೆ ಹೃದಯವಂತ ರೈತ ನಾಯಕ ಕರುಣಾಮಯಿ ಕುಮಾರಣ್ಣ ಅವರಿಗೆ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ. ಆದ್ದರಿಂದ ತಾಲ್ಲೂಕಿನ ಪ್ರಜ್ಞಾವಂತ ಮತದಾರರ ಪರವಾಗಿ ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಒಗ್ಗೂಡಿ ಸನ್ಮಾನಿಸಿ ಅಭಿನಂದಿಸಿ ಗೌರವಿಸಲು ನಿರ್ಧರಿಸಲಾಗಿದೆ. ಆದ್ದರಿಂದ ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕೇಂದ್ರ ಸಚಿವರಾದ ಕುಮಾರಣ್ಣ ಅವರ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿಕೊಡಬೇಕೆಂದು ಮನವಿ ಮಾಡಿದರು.

ಶಾಸಕ ಮಂಜು ಮಾತನಾಡಿ, ಕುಮಾರಣ್ಣ ಅವರು ಕೇಂದ್ರದ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಕೆ. ಆರ್. ಪೇಟೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಒಂದಾಗಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದಾರೆ. ಆದ್ದರಿಂದ ಕಾರ್ಯಕರ್ತರು ಐತಿಹಾಸಿಕ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಇತಿಹಾಸ ನಿರ್ಮಿಸಬೇಕೆಂದರು.

ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಜಾನಕಿರಾಮ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ, ಮೂಡ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ್, ಮುಖಂಡರಾದ ಪೂನಾಶಂಕರ್, ಮಂಜೇಗೌಡ, ಶೀಳನೆರೆ ಸಿದ್ದೇಶ್, ಪ್ರಕಾಶ್, ನಾಗೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ