Thursday, September 19, 2024

ಪ್ರಾಯೋಗಿಕ ಆವೃತ್ತಿ

ಜುಲೈ 20ರಂದು ನೀಟ್ – ಯುಜಿ ಫಲಿತಾಂಶ ಪ್ರಕಟಿಸಲು ‘ಸುಪ್ರೀಂ’ ನಿರ್ದೇಶನ

ಜುಲೈ 20 ರಂದು ಮಧ್ಯಾಹ್ನ 12 ಗಂಟೆಯೊಳಗೆ ನೀಟ್‌ – ಯುಜಿ ಪರೀಕ್ಷೆಯ ಫಲಿತಾಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಫಲಿತಾಂಶವನ್ನು ಅಭ್ಯರ್ಥಿಗಳ ಗುರುತನ್ನು ಮರೆಮಾಡಿ ನಗರವಾರು ಹಾಗೂ ಕೇಂದ್ರವಾರು ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಹಾಗೂ ಮನೋಜ್‌ ಮಿಶ್ರಾ ಅವರ ಪೀಠ ನೀಟ್ ಯುಜಿ ಪರೀಕ್ಷೆಯ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಿತು.

ವಿಚಾರಣೆಯ ಸಮಯದಲ್ಲಿ ಅರ್ಜಿದಾರರ ಪರವಾಗಿ ಹಿರಿಯ ನ್ಯಾಯವಾದಿ ನರೇಂದ್ರ ಹೂಡ ಹಾಜರಿದ್ದರು. ಸುಪ್ರೀಂ ಪೀಠವು ಎರಡೂ ಕಡೆಯ ವಿಚಾರಣೆಗಳನ್ನು ಆಲಿಸಿತು.

ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿದ್ದರೆ ಮಾತ್ರ ಮರು ಪರೀಕ್ಷೆ

ನೀಟ್‌ – ಯುಜಿ 2024 ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದು ವೈದ್ಯಕೀಯ ಪ್ರವೇಶ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿದ್ದರೆ ಮಾತ್ರ ಮರುಪರೀಕ್ಷೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠ ನೀಟ್‌ ಯುಜಿ ಪರೀಕ್ಷೆಯಲ್ಲಿ ಅಕ್ರಮ ಹಾಗೂ ಉತ್ತರ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ 40 ಅರ್ಜಿಗಳ ವಿಚಾರಣೆ ನಡೆಸಿತು.

ಸಂಪೂರ್ಣ ಪರೀಕ್ಷೆಯನ್ನು ರದ್ದುಪಡಿಸಬೇಕಾದರೆ ಪತ್ರಿಕೆ ಸೋರಿಕೆ ಪರಿಣಾಮಕಾರಿಯಾಗಿದೆ ಎಂದು ಪೂರಕ ಸಾಕ್ಷಾಧಾರಗಳೊಂದಿಗೆ ಸ್ಪಷ್ಟಪಡಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಹಿರಿಯ ವಕೀಲರಾದ ನರೇಂದ್ರ ಹೂಡ ಹಾಗೂ ಪ್ರತಿನಿಧಿಸಿದ್ದ ಅರ್ಜಿದಾರರಿಗೆ ಸೂಚನೆ ನೀಡಿದರು.

ದೇಶಾದ್ಯಂತ ಸರ್ಕಾರ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳ ಸೀಟುಗಳ ಸಂಖ್ಯೆಯ ಬಗ್ಗೆ ತಿಳಿಸುವಂತೆ ಮುಖ್ಯ ನ್ಯಾಯಮೂರ್ತಿಗಳು ಹೂಡ ಅವರನ್ನು ಪ್ರಶ್ನಿಸಿದರು.

ಒಂದು ಲಕ್ಷಕ್ಕೂ ಹೆಚ್ಚು ಸೀಟುಗಳಿದ್ದು, ಒಂದು ವೇಳೆ ಮರು ಪರೀಕ್ಷೆ ನಡೆಸಿದರೆ ಒಟ್ಟು 23 ಲಕ್ಷ ಅಭ್ಯರ್ಥಿಗಳಲ್ಲಿ ಈಗ ಅಕ್ರಮವಾಗಿ ಪ್ರವೇಶ ಪಡೆದಿರುವ ಹಲವು ಮಂದಿಗೆ ಸೀಟು ಲಭಿಸುವುದಿಲ್ಲ. ಹಲವು ಪ್ರಮಾಣಿಕ ಅಭ್ಯರ್ಥಿಗಳು ಪ್ರವೇಶ ಪಡೆಯಲಿದ್ದಾರೆ ಎಂದು ಪೀಠಕ್ಕೆ ಮನವರಿಕೆ ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ನಾವು ಮರು ಪರೀಕ್ಷೆಗೆ ಆದೇಶಿಸಲು ಸಾಧ್ಯವಿಲ್ಲ. ಸಂಪೂರ್ಣ ಪರೀಕ್ಷೆಯನ್ನು ರದ್ದುಪಡಿಸಬೇಕಾದರೆ ಪತ್ರಿಕೆ ಸೋರಿಕೆ ಪರಿಣಾಮಕಾರಿಯಾಗಿದೆ ಎಂದು ಪೂರಕ ಸಾಕ್ಷಾಧಾರಗಳೊಂದಿಗೆ ಸ್ಪಷ್ಟಪಡಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಸೋಮವಾರ ವಿಚಾರಣೆಯನ್ನು(ಜುಲೈ 22) ಮುಂದುವರಿಸಲಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!