ಔತಣಕೂಟದ ಬಳಿಕ ತಮಾಷೆಗೆಂದು ಹಳಿ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು ಯುವಕರು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೇ ನಿಲ್ದಾಣದ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ಮೃತರನ್ನು ಮೌನೇಶ್ (23), ಸುನೀಲ್ (23) , ವೆಂಕಟ ಭೀಮಾನಾಯ್ಕ್ (20) ಎಂದು ಗುರುತಿಸಲಾಗಿದೆ. ರೈಲ್ವೆ ಹಳಿಯ ಪಕ್ಕದಲ್ಲಿ ಯುವಕರು ಔತಣಕೂಟ ಮಾಡಿದ್ದಾರೆ. ಬಳಿಕ ತಮಾಷೆಗೆಂದು ಹಳಿಯ ಮೇಲೆಯೇ ಮಲಗಿದ್ದಾರೆ. ಈ ಸಂದರ್ಭದಲ್ಲಿ ಗಂಗಾವತಿ ಮಾರ್ಗವಾಗಿ ಹೊರಟಿದ್ದ ಹುಬ್ಬಳ್ಳಿ-ಸಿಂಧನೂರು ಪ್ಯಾಸೆಂಜರ್ ರೈಲು ಚಲಿಸಿದ ಪರಿಣಾಮ ಯುವಕರು ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ಮದ್ಯದ ಬಾಟಲಿ, ಮೊಬೈಲ್ ಹಾಗೂ ಕೆಲವು ತಿಂಡಿ ಪಾಕೇಟ್‌ಗಳಿದ್ದು ಸ್ಥಳಕ್ಕೆ ರೈಲ್ವೆ ಇಲಾಖೆಯ ಪಿಎಸ್‌ಐ ಬಿ ಎನ್ ರಾಮಣ್ಣ ನೇತೃತ್ವದ ರೈಲ್ವೆ ಪೊಲೀಸ್ ತಂಡ ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.




