Thursday, September 19, 2024

ಪ್ರಾಯೋಗಿಕ ಆವೃತ್ತಿ

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನೀಟ್ ಫಲಿತಾಂಶ ಪ್ರಕಟಿಸಿದ ಎನ್‌ಟಿಎ

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಶನಿವಾರ ತನ್ನ ವೆಬ್‌ಸೈಟ್‌ನಲ್ಲಿ ನೀಟ್-ಯಜಿ 2024ರ ಫಲಿತಾಂಶ ಪ್ರಕಟಿಸಿದೆ.

ಈ ವರ್ಷದ ನೀಟ್-ಯುಜಿ’ಯ ಕೇಂದ್ರವಾರು ಮತ್ತು ನಗರವಾರು ಫಲಿತಾಂಶವನ್ನು ಜುಲೈ 20 ಮಧ್ಯಾಹ್ನ 12 ಗಂಟೆಯೊಳಗೆ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಎನ್‌ಟಿಎಗೆ ನಿರ್ದೇಶಿಸಿತ್ತು. ಈ ವೇಳೆ ವಿದ್ಯಾರ್ಥಿಗಳ ಗುರುತನ್ನು ಬಹಿರಂಗಪಡಿಸಬಾರದು ಎಂದು ಸೂಚಿಸಿತ್ತು. ಅದರಂತೆ ಎನ್‌ಟಿಎ ಫಲಿತಾಂಶ ಪ್ರಕಟಿಸಿದೆ.

ಎನ್‌ಟಿಎ ಎಲ್ಲಾ ಅಭ್ಯರ್ಥಿಗಳ ಫಲಿತಾಂಶವನ್ನು ಪ್ರಕಟಿಸದ ಕಾರಣ ಕೇಂದ್ರವಾರು ಅಂಕಗಳ ಮಾದರಿಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿದಾರರು ದೂರಿರುವ ಹಿನ್ನೆಲೆ, ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ನ್ಯಾಯಾಲಯ, ಫಲಿತಾಂಶಗಳನ್ನು ಪ್ರಕಟಿಸುವಂತೆ ಎನ್‌ಟಿಎಗೆ ಸೂಚಿಸಿತ್ತು.

ಮೇ 5, 2024 ರಂದು ದೇಶದಾದ್ಯಂತ ನಡೆದ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ -ಯುಜಿಯ ಫಲಿತಾಂಶ ಜೂನ್ 4, 2024 ರಂದು ಪ್ರಕಟಗೊಂಡಿತ್ತು. ಈ ಬೆನ್ನಲ್ಲೇ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ದೇಶದ ಹಲವೆಡೆ ಪ್ರತಿಭಟನೆಗಳು ನಡೆದಿತ್ತು. ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಕೆಲ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!