Friday, November 20, 2026

ಪ್ರಾಯೋಗಿಕ ಆವೃತ್ತಿ

ಚನ್ನಪಟ್ಟಣ ಉಪಚುನಾವಣೆ| ಟಿಕೆಟ್ ಆಕಾಂಕ್ಷಿ ‘ಸೈನಿಕ’ನಿಗೆ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್ !

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಟಿಕೆಟ್ ಸಿ.ಪಿ.ಯೋಗೇಶ್ವರ್ ಗೆ ಇಲ್ಲ ಎಂಬ ಸುದ್ದಿ ದೆಹಲಿಯಿಂದ ಬಂದಿದೆ. ನನಗೆ ಬಿಜೆಪಿ ಟಿಕೆಟ್ ಪಕ್ಕಾ ಎಂದು ಹೇಳುತ್ತಿದ್ದ ಸಿ.ಪಿ.ಯೋಗೇಶ್ವರ್ ಗೆ ಈ ಸುದ್ದಿ ಶಾಕ್ ನೀಡಿದೆ.

ವಿಧಾನ ಪರಿಷತ್ ಸದಸ್ಯರಾಗಿದ್ದೂ ಸಹ ಮತ್ತೆ ಉಪ ಚುನಾವಣೆ ಟಿಕೆಟ್ ಕೇಳುತ್ತಿರುವುದು ಸರಿಯಲ್ಲ. ವಿಧಾನ ಪರಿಷತ್ ಗೆ ಯೋಗೇಶ್ವರ್ ರಾಜೀನಾಮೆ ನೀಡಿದರೆ ಅದು ಕಾಂಗ್ರೆಸ್ ಪಕ್ಷದ ಪಾಲಾಗುತ್ತೆ. ಅಲ್ಲದೆ ಚನ್ನಪಟ್ಟಣ ಜೆಡಿಎಸ್ ಪಕ್ಷದ ಭದ್ರಕೋಟೆ, ಹಾಗಾಗಿ ನಾವು ಅವರ ಕ್ಷೇತ್ರದಲ್ಲಿ ಕೈ ಹಾಕುವುದು ಬೇಡ ಎನ್ನುವ ಸ್ಪಷ್ಟ ಸಂದೇಶವನ್ನು ಬಿಜೆಪಿ ಹೈ ಕಮಾಂಡ್ ನೀಡಿದೆ ಎಂಬ ಸುದ್ದಿ ಬಿಜೆಪಿ ವಲಯದಲ್ಲಿ‌ ಸಾಕಷ್ಟು ಚರ್ಚೆಯಾಗುತ್ತಿದೆ.

ಹೆಚ್.ಡಿ.ಕುಮಾರಸ್ವಾಮಿ ಲೋಕಸಭಾ ಸದಸ್ಯರಾಗಿ ಕೇಂದ್ರ ಮಂತ್ರಿಯಾದ ಮೇಲೆ ನನಗೆ ಚನ್ನಪಟ್ಟಣ ಟಿಕೆಟ್ ಪಕ್ಕಾ. ಈ ಬಗ್ಗೆ ಕುಮಾರಸ್ವಾಮಿ ಅವರೇ ಹೇಳಿದ್ದಾರೆ ಎಂದು ಬೀಗಿದ್ದ ಯೋಗೇಶ್ವರ್. ಆದರೆ ಕುಮಾರಸ್ವಾಮಿ ಯೋಗೇಶ್ವರ್ ಗೆ ಟಿಕೆಟ್ ಎಂದು ನಾನು ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದರು.

ಹಾಗೆಯೇ ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದ್ದು ಬಿಜೆಪಿ ಅಭ್ಯರ್ಥಿ ನಿಂತರೆ ಕಾಂಗ್ರೆಸ್ ಅಭ್ಯರ್ಥಿಗೆ ಅವಕಾಶ ಹೆಚ್ಚು. ಹಾಗಾಗಿ ಜೆಡಿಎಸ್ ಅಭ್ಯರ್ಥಿಯನ್ನೇ ನಿಲ್ಲಿಸಬೇಕು ಎಂದು ಜೆಡಿಎಸ್ ಕಾರ್ಯಕರ್ತರು, ಮುಖಂಡರು ಆಗ್ರಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಅಕ್ಕ ಅನುಸೂಯ ಮಂಜುನಾಥ್ ಹೆಸರು ಕೂಡ ಕೇಳಿ ಬರುತ್ತಿವೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ