Monday, November 23, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಲಾರಿ- ಬೈಕ್ ನಡುವೆ ಅಪಘಾತ: ಓರ್ವ ಸಾವು ; ಮತ್ತೊರ್ವ ಗಾಯ

ಲಾರಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿ ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಾರ್ಕಾಲು ಗೇಟ್ ಬಳಿ ನಡೆದಿದೆ.

ಮಳವಳ್ಳಿ ತಾಲ್ಲೂಕಿನ ಕೊದೇನಕೊಪ್ಪಲು ಗ್ರಾಮದ ಲೇ.ಕರಿಯಪ್ಪ ಎಂಬುವವರ ಪುತ್ರ ಮಾದೇಗೌಡ(63) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಬಸವೇಗೌಡ ತೀವ್ರಗಾಯಗೊಂಡವರಾಗಿದ್ದಾರೆ.

ಮಾದೇಗೌಡ ತಮ್ಮ ಬೈಕ್ ನಲ್ಲಿ ಬಸವೇಗೌಡ ಎಂಬುವವರ ಜತೆ ಕೊದೇನಕೊಪ್ಪಲು ಗ್ರಾಮದಿಂದ ಮಳವಳ್ಳಿಗೆ ಬರುತ್ತಿದ್ದ ವೇಳೆ ಮೈಸೂರು-ಮಳವಳ್ಳಿ ರಾಜ್ಯ ಹೆದ್ದಾರಿಯ ಮಾರ್ಕಾಲು ಗೇಟ್ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಡಿಕ್ಕಿ ರಭಸಕ್ಕೆ ಮೃತ ಮಾದೇಗೌಡರ ದೇಹ ರುಂಡ ಮುಂಡಗಳು ಎರಡು ಭಾಗವಾಗುವುದರ ಜೊತೆಗೆ ಮೇಲ್ಬಾಗದ ದೇಹ ಸಂಪೂರ್ಣ ಛಿದ್ರಗೊಂಡಿದೆ.

ಅಪಘಾತ ನಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿ, ಮತ್ತೊಬ್ಬ ಗಾಯಗೊಂಡಿದ್ದರೂ ಕೂಡ ಪೊಲೀಸರು ಸ್ಥಳಕ್ಕೆ ಬರುವತನಕ ಸುಮಾರು ಕೆಲ ನಿಮಿಷಗಳ ಕಾಲ ಸಾರ್ವಜನಿಕರು ವಿಡಿಯೋ ಮಾಡಿಕೊಳ್ಳುತ್ತಿದ್ದರೆ ಹೊರತು, ಹತ್ತಿರ ಹೋಗಲು ಯಾರು ಮುಂದೆ ಬಾರದಿರುವುದು ಮಾನವೀಯತೆಯನ್ನು ಅಣಕಿಸುವಂತಿತ್ತು.

ಅಪಘಾತವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಹಾಗೂ ಸಬ್ ಇನ್ಸ್ ಪೆಕ್ಟರ್ ರವಿಕುಮಾರ್ ತಮ್ಮ ಕಾರಿನಲ್ಲಿಯೇ ಗಾಯಗೊಂಡ ಬಸವೇಗೌಡರನ್ನು ಕರೆತಂದು ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದರ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಈ ಸಂಬಂಧ ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ