Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಜೆಟ್ ತಾರತಮ್ಯ| ಸಂಸತ್ತಿನ ಎದುರು ಇಂಡಿಯಾ ಒಕ್ಕೂಟದ ಪ್ರತಿಭಟನೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು ಈ ಬಜೆಟ್‌ನಲ್ಲಿ ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳ ವಿರುದ್ಧ ‘ತಾರತಮ್ಯ’ ಮಾಡಿರುವುದನ್ನು ವಿರೋಧಿಸಿ ಇಂಡಿಯಾ ಒಕ್ಕೂಟವು ಇಂದು (ಜುಲೈ 24) ಸಂಸತ್ತಿನಲ್ಲಿ ಮತ್ತು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿತು.ನಡೆಸಲಿದೆ.

ಕೇಂದ್ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ತನ್ನ ಮಿತ್ರ ಪಕ್ಷಗಳಾದ ಜೆಡಿಯು ಮತ್ತು ಟಿಡಿಪಿ ಆಡಳಿತವಿರುವ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಮೀಸಲಾಗಿ ಬಹುತೇಕ ಯೋಜನೆಗಳನ್ನು ಘೋಷಿಸಿದೆ. ಕರ್ನಾಟಕ, ಪಂಜಾಬ್ ಸೇರಿದಂತೆ ಹಲವಾರು ರಾಜ್ಯಗಳನ್ನು ಬಜೆಟ್‌ನಲ್ಲಿ ಕಡೆಗಣಿಸಲಾಗಿದೆ. ವಿಪಕ್ಷಗಳನ್ನು ಇದನ್ನು ತೀವ್ರವಾಗಿ ವಿರೋಧಿಸಿದೆ.

ಇಂಡಿಯಾ ಒಕ್ಕೂಟವು ಬಜೆಟ್ ವಿಚಾರದಲ್ಲಿಉನ್ನತ ಮಟ್ಟದ ಸಭೆ ನಡೆಸಿದ್ದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಉಭಯ ಸದನಗಳಲ್ಲಿ ಕಾಂಗ್ರೆಸ್‌ನ ಉಪನಾಯಕರಾದ ಪ್ರಮೋದ್ ತಿವಾರಿ ಮತ್ತು ಗೌರವ್ ಗೊಗೋಯ್, ಎನ್‌ಸಿಪಿ (ಎಸ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಭಾಗಿಯಾಗಿದ್ದರು.

ಹಾಗೆಯೇ ಟಿಎಂಸಿಯ ಡೆರೆಕ್ ಓಬ್ರಿಯಾನ್ ಮತ್ತು ಕಲ್ಯಾಣ್ ಬ್ಯಾನರ್ಜಿ, ಡಿಎಂಕೆಯ ಟಿಆರ್ ಬಾಲು, ಜೆಎಂಎಂನ ಮಹುವಾ ಮಜಿ, ಎಎಪಿಯ ರಾಘವ್ ಚಡ್ಡಾ ಮತ್ತು ಸಂಜಯ್ ಸಿಂಗ್, ಸಿಪಿಐ(ಎಂ)ನ ಜಾನ್ ಬ್ರಿಟಾಸ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಜೈರಾಮ್ ರಮೇಶ್ ಕೂಡಾ ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಬಜೆಟ್‌ನಲ್ಲಿರುವ ತಾರತಮ್ಯದ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ವೇಣುಗೋಪಾಲ್, “ಈ ವರ್ಷದ ಕೇಂದ್ರ ಬಜೆಟ್‌ ಈಗಾಗಲೇ ಬಜೆಟ್‌ನ ಪರಿಕಲ್ಪನೆಯನ್ನು ನಾಶಪಡಿಸಿದೆ. ಬಹುತೇಕ ರಾಜ್ಯಗಳ ವಿರುದ್ಧ ಸಂಪೂರ್ಣವಾಗಿ ತಾರತಮ್ಯ ಮಾಡಲಾಗಿದೆ. ಆದ್ದರಿಂದ ಇಂಡಿಯಾ ಒಕ್ಕೂಟವು ಈ ಬಜೆಟ್ ವಿರುದ್ಧ ಪ್ರತಿಭಟಿಸುತ್ತದೆ” ಎಂದು ತಿಳಿಸಿದ್ದಾರೆ.

ತಮ್ಮ ಪ್ರತಿಭಟನೆಯ ಭಾಗವಾಗಿ ವಿಪಕ್ಷ ಆಡಳಿತವಿರುವ ರಾಜ್ಯದ ಮುಖ್ಯಮಂತ್ರಿಗಳು ಜುಲೈ 27ರಂದು ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲಿದ್ದಾರೆ. “ಈ ಸರ್ಕಾರದ ಧೋರಣೆ ಸಂಪೂರ್ಣವಾಗಿ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ. ನಿಜ, ತಾರತಮ್ಯದ ಬಣ್ಣಗಳನ್ನು ಮರೆಮಾಡಲು ವಿನ್ಯಾಸಗೊಳಿಸಲಾದ ಕಾರ್ಯಕ್ರಮದಲ್ಲಿ ನಾವು ಭಾಗವಹಿಸುವುದಿಲ್ಲ” ಎಂದು ವೇಣುಗೋಪಾಲ್ ತಿಳಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಮಾಜವಾದಿ ನಾಯಕ ಅಖಿಲೇಶ್ ಯಾದವ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!