Friday, October 18, 2024

ಪ್ರಾಯೋಗಿಕ ಆವೃತ್ತಿ

ಹೆಚ್.ಡಿ.ದೇವೇಗೌಡ – ಕುಮಾರಸ್ವಾಮಿ ಅವರಿಂದ ಪ್ರಧಾನಿ ಮೋದಿ ಭೇಟಿ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಅವರ ಮಗ, ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಅವರನ್ನು ಗುರುವಾರ ಭೇಟಿಯಾಗಿದ್ದಾರೆ. ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಭೇಟಿಯ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ, “ದೇವೇಗೌಡರು ತಮ್ಮನ್ನು ಭೇಟಿಯಾದದ್ದು ಗೌರವದ ಸಂಗತಿ. ವಿವಿಧ ವಿಷಯಗಳ ಬಗ್ಗೆ ಅವರ ಜಾಣ್ಮೆ ಮತ್ತು ದೃಷ್ಟಿಕೋನಗಳು ಬಹಳ ಆಳವಾಗಿವೆ ಮತ್ತು ಮೌಲ್ಯಯುತವಾಗಿವೆ. ನನಗೆ ಕಲಾಕೃತಿಯನ್ನು ಉಡುಗೊರೆ ನೀಡುವ ಮೂಲಕ ನನ್ನ ಇತ್ತೀಚಿನ ಕನ್ಯಾಕುಮಾರಿ ಭೇಟಿಯನ್ನು ನೆನಪಿಸಿದ್ದಾರೆ. ಅವರಿಗೆ ಕೃತಜ್ಞನಾಗಿದ್ದೇನೆ” ಎಂದಿದ್ದಾರೆ.

ರಾಜ್ಯಸಭಾ ಸದಸ್ಯರಾಗಿರುವ ಹೆಚ್‌.ಡಿ ದೇವೇಗೌಡ ಅವರು ಸಂಸತ್‌ ಸದನದಲ್ಲಿ ಭಾಗಿಯಾಗಲು ದೆಹಲಿಯಲ್ಲಿದ್ದಾರೆ. ಗುರುವಾರ ನಡೆದ ಕಲಾಪದಲ್ಲಿ ಅವರು ಶಿರೂರು ಗುಡ್ಡ ಕುಸಿತದ ಬಗ್ಗೆ ಪ್ರಸ್ತಾಪಿಸಿದ್ದರು.

“>

 

ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಯೋಜನೆ, ಅನುದಾನಗಳನ್ನು ನೀಡಲಾಗಿಲ್ಲ. ರಾಜ್ಯವನ್ನು ಕಡೆಗಣಿಸಲಾಗಿದೆ ಎಂದು ವ್ಯಾಪಕ ಆಕ್ರೋಶ ಕೇಳಿಬರುತ್ತಿದೆ. ಕೇಂದ್ರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಆರೋಪಿಸಲಾಗಿದೆ. ಇಂತಹ ಸಮಯದಲ್ಲಿಯೂ ಬಜೆಟ್‌ಅನ್ನು ಹೊಗಳಿರುವ ಎಚ್‌.ಡಿ ಕುಮಾರಸ್ವಾಮಿ ಅವರು ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆದರೆ, ಅವರ ಭೇಟಿಯಿಂದ ರಾಜ್ಯಕ್ಕೆ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!