Friday, October 18, 2024

ಪ್ರಾಯೋಗಿಕ ಆವೃತ್ತಿ

ಅಪಾಯಮಟ್ಟ ಮೀರಿದ ಕಾವೇರಿ| KRS ಜಲಾಶಯದಿಂದ1,30,000 ಕ್ಯೂಸೆಕ್ಸ್ ನೀರು ಬಿಡುಗಡೆ

ಕಾವೇರಿ ಕಣಿವೆಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನದಿಯು ಅಪಾಯಮಟ್ಟ ಮೀರಿ ಹರಿಯುತ್ತಿದೆ. ಕೆ.ಆರ್.ಎಸ್ ಅಣೆಕಟ್ಟೆಗೆ 1 ಲಕ್ಷ ಕ್ಯೂಸೆಕ್ಸ್ ಗೂ ಹೆಚ್ಚು ಒಳಹರಿವು ಇರುವುದರಿಂದ 1,30,000 ಕ್ಯೂಸೆಕ್ಸ್ ಗೂ ಹೆಚ್ಚು ನೀರನ್ನು ಅಣೆಕಟ್ಟೆಯಿಂದ ಬಿಡುಗಡೆ ಮಾಡಲಾಗುತ್ತಿದೆ.

ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಯಬಿಟ್ಟಿರುವುದರಿಂದ ಶ್ರೀರಂಗಪಟ್ಟಣದ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮ, ಪಶ್ಚಿಮವಾಹಿನಿ, ಸ್ನಾನಘಟ್ಟೆ, ಶ್ರೀಸಾಯಿ ಮಂದಿರ, ವೆಲ್ಲೆಸ್ಲಿ ಸೇತುವೆಗಳು ಭಾಗಶಃ ಮುಳುಗಡೆಯಾಗಿದೆ. ನಿಮಿಷಾಂಬ ದೇವಾಲಯದ ಮೆಟ್ಟಿಲುಗಳವರೆಗೆ ನದಿಯ ನೀರು ಏರಿಕೆಯಾಗಿದ್ದು, ದೇವಾಲಯದ ಮುಂಭಾಗದ ರಸ್ತೆಯೂ ಜಲಾವೃತವಾಗಿದೆ.

nudikarnataka.com

ಅಲ್ಲದೇ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳು ಭಾಗಶಃ ಮುಳುಗಡೆಗೊಂಡಿವೆ. ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ಭತ್ತದ ನಾಟಿಗೆ ಸಿದ್ದತೆ ಮಾಡಿಕೊಂಡಿದ್ದ ರೈತರಿಗೆ ಸಂಕಷ್ಟ ತಂದೊಡ್ಡಿದೆ.

ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಹಾಗೂ ರೈತರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದ್ದಾರೆ.

“>

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!