Friday, November 20, 2026

ಪ್ರಾಯೋಗಿಕ ಆವೃತ್ತಿ

ಮುಡಾ ಹಗರಣ ಸಿಬಿಐ ತನಿಖೆಗೆ ಆಗ್ರಹಿಸಿ ಪಾದಯಾತ್ರೆ: ನಿಖಿಲ್ ಕುಮಾರಸ್ವಾಮಿ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಬೆಂಗಳೂರಿನ ಮೈಸೂರಿಗೆ ಬೃಹತ್ ಪಾದಯಾತ್ರೆ ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮಂಡ್ಯನಗರದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೈಸೂರು ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣ ಸಿಬಿಐಗೆ ವಹಿಸಲು ಆಗ್ರಹಿಸಿ ಪಾದಯಾತ್ರೆ ಕೈಗೊಳ್ಳಲಾಗಿದೆ. ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದರು.

ಮಂಡ್ಯ ಜಿಲ್ಲಾದ್ಯಂತ ಪ್ರವಾಸ ಮಾಡಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ, ಚುನಾವಣೆ ಫಲಿತಾಂಶದ ಬಳಿಕ ಜೆಡಿಎಸ್ ಇರಲ್ಲ ಅಂತ ಕಾಂಗ್ರೆಸ್ ಹೇಳಿದ್ರು. ಆದರೆ ಕುಮಾರಣ್ಣ ಹೆಚ್ಚು ಅಂತರದಲ್ಲಿ ಗೆಲುವು ಸಾಧಿಸಿದರು. ಆದರೂ ನನ್ನ ಸೋಲನ್ನು ಮರೆಯಲು ಸಾಧ್ಯವಿಲ್ಲ. ಭಗವಂತನ ಆಶೀರ್ವಾದ ಕುಮಾರಣ್ಣ ಕೇಂದ್ರ ಸಚಿವರಾಗಿದ್ದಾರೆ. ಕುಮಾರಣ್ಣ ಅವರಿಗೆ ಪ್ರಧಾನಿ ಮೋದಿ ಗೌರವ ಕೊಟ್ಟಿದ್ದಾರೆ. ಕುಮಾರಣ್ಣನಿಗೆ ಕನ್ನಡ ಭಾಷೆಯ ಮೇಲೆ ಗೌರವ ಇದೆ ಎಂದರು.

ಕುಮಾರಣ್ಣ ಜಿಲ್ಲೆಯ ಅಭಿವೃದ್ಧಿಗೆ ಈಗಾಗಲೇ ಚಾಲನೆ ಕೊಟ್ಟಿದ್ದಾರೆ, ವಾರದಲ್ಲಿ ಒಂದು ದಿನ ತಂದೆಯವರು ಬರ್ತಾರೆ. ಅವರ ಅನುಪಸ್ಥಿತಿಯಲ್ಲಿ ನಾನು ಜಿಲ್ಲೆಯಲ್ಲಿ ನಿಮ್ಮ ಜೊತೆ ಇರ್ತೇನೆ. ಎಂಪಿ ಕಚೇರಿಯಲ್ಲಿ ಕುಳಿತು ಸಾರ್ವಜನಿಕರ ಸಮಸ್ಯೆ ಕೇಳುತ್ತೇನೆ. ಸಾರ್ವಜನಿಕ ಸಮಸ್ಯೆ ಕೇಳಲು ಶಾಶ್ವತವಾಗಿ ಪಕ್ಷದ ಕಚೇರಿ ಆರಂಭ ಮಾಡಲಾಗುವುದು ಎಂದರು.

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಹಗರಣ ಹೊರ ಬರುತ್ತಿದೆ, ಬಿಜೆಪಿ ವಿರುದ್ಧ 40% ಆರೋಪ ಮಾಡಿದ್ರು. ಇವತ್ತು ಕಾಂಗ್ರೆಸ್ ಸರ್ಕಾರ ಹಗರಣದ ಮೇಲೆ ಹಗರಣ ಮಾಡಿದ್ದಾರೆ. ವಾಲ್ಮೀಕಿ ನಿಗಮದ 187 ಕೋಟಿ ಹಗರಣ ಕಣ್ಣ ಮುಂದೆ ಇದೆ. ಸಿಎಂ ಕೂಡ 87 ಕೋಟಿ ಅಂತ ಒಪ್ಪಿಕೊಂಡಿದ್ದಾರೆ. ಸಾರ್ವಜನಿಕರು ಕಟ್ಟುವ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ದೂರಿದರು.

ಎಸ್ಸಿ,ಎಸ್ಟಿ ಸಮುದಾಯವನ್ನು ಓಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ, ಮುಡಾ ಹಗರಣ ವಿಚಾರವಾಗಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಹಾಲಿನ ಪ್ರೋತ್ಸಾಹ ಧನ 1200ಕೋಟಿಯನ್ನ ರೈತರಿಗೆ ಕೊಟ್ಟಿಲ್ಲ. ರೈತಾಪಿ ವರ್ಗದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಡೆಂಗ್ಯೂ ನಿಯಂತ್ರಣ ಮಾಡ್ತಿಲ್ಲ ಎಂದು ದೂರಿದರು.

ಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಅಧ್ಯಕ್ಷ ಸುರೇಶ್ ಬಾಬು,  ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ, ಸುರೇಶ್ ಗೌಡ, ಕೆ.ಟಿ.ಶ್ರೀಕಂಠೇಗೌಡ, ಕೆ.ಎಸ್.ವಿಜಯ್ ಆನಂದ್, ಕೆ.ಆರ್.ರಾಮಚಂದ್ರು ಹಾಗೂ ಜಿಲ್ಲಾಧ್ಯಕ್ಷ ಡಿ.ರಮೇಶ್ ಸೇರಿದಂತೆ ಮತ್ತಿತರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ