Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮುಖ್ಯಮಂತ್ರಿಗೆ ಕಪ್ಪುಬಾವುಟ ಪ್ರದರ್ಶನ: ದಸಂಸ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಜುಲೈ 29ರಂದು ಆಗಮಿಸುವ ಸಂದರ್ಭದಲ್ಲಿ ಅವರ ರಾಜೀನಾಮೆಗೆ ಒತ್ತಾಯಿಸಿ ಕಪ್ಪುಬಾವುಟ ತೋರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಬಜೆಟ್ಟಿನಲ್ಲಿ ಮೀಸಲಾರಿಸಿದ್ಧ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿಟ್ಟಿತ್ತು. ಆದರೆ ಆ ಹಣವನ್ನು ಗ್ಯಾರಂಟಿ ಯೋಜನೆಗಳಿಗಾಗಿ ದುರ್ಬಳಕೆ ಮಾಡಿಕೊಂಡು ಪರಿಶಿಷ್ಟರಿಗೆ ವಂಚನೆ ಮಾಡಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ಆರೋಪಗಳು ಕೇಳಿ ಬರುತ್ತಿದೆ. ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಸೇರಿದಂತೆ ಹಲವಾರು ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು .

ಗೋಷ್ಠಿಯಲ್ಲಿ ಬಿ ಆನಂದ್ ,ಮರಂಕಯ್ಯ, ಸುರೇಶ್ ಕುಮಾರ್ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!