Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕನ್ನಂಬಾಡಿಯಲ್ಲಿ ಕಾವೇರಿಗೆ ಬಾಗಿನ ಸಮರ್ಪಿಸಿದ ಸಿಎಂ ಸಿದ್ದರಾಮಯ್ಯ

ಗರಿಷ್ಠ ಮಟ್ಟವಾದ 124.80 ಅಡಿ ತಲುಪಿರುವ ಕೃಷ್ಣರಾಜಸಾಗರ ಅಣೆಕಟ್ಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮಧ್ಯಾಹ್ನ ಬಾಗಿನ ಸಮರ್ಪಣೆ ಮಾಡಿದರು.

ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎನ್.ಚಲುವರಾಯಸ್ವಾಮಿ ಹಾಗೂ ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಸಚಿವರು ಕಾವೇರಿಗೆ ಬಾಗಿನ ಅರ್ಪಿಸಿ ಧನ್ಯತೆ ಪಡೆದರು.

ಮೈಸೂರಿನಿಂದ ಹೊರಟ ಸಿಎಂ ಸಿದ್ದರಾಮಯ್ಯ ಅವರು ರಸ್ತೆ ಮೂಲಕ ಕೆ.ಆರ್.ಎಸ್ ಗೆ ಆಗಮಿಸಿ ಕೃಷ್ಣರಾಜಸಾಗರ ಜಲಾಯಶಯದ ಬಳಿ ಇರುವ ಕಾವೇರಿ ಪ್ರತಿಮೆಯ ಬಳಿ ಮೊದಲು ಪೂಜೆ ಸಲ್ಲಿಸಿ, ನಂತರ  ಅಣೆಕಟ್ಟೆಗೆ ಬಾಗಿನ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ಕೆ.ಎಂ.ಉದಯ್‌, ದರ್ಶನ್ ಪುಟ್ಟಣ್ಣಯ್ಯ, ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ ಸೇರಿದಂತೆ ಹಲವು ಗಣ್ಯರಯ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ