Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಕಡ್ಡಾಯ: ಶೇಕ್ ತನ್ವಿರ್ ಆಸೀಫ್

ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ಬಯೋ ಮೆಟ್ರಿಕ್ ಮೂಲಕ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸುವಂತೆ ಹಾಗೂ ನಿಗಧಿತ ಸಮಯಕ್ಕೆ ಹಾಜರಾಗಿ ಸಾರ್ವಜನಿಕ ಕೆಲಸಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ ಎಂದು ಮಂಡ್ಯ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.

ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರು ಆಗಸ್ಟ್ 2 ರಂದು ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಲು ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿ, ಉಪವಿಭಾಗಗಳ ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲ್ಲೂಕು ಪಂಚಾಯತ್‌ಗಳ ಸಹಾಯಕ ನಿರ್ದೇಶಕರು(ಗ್ರಾ.ಉ.)&(ಪಂ.ರಾಜ್) ಹಾಗೂ ಜಿಲ್ಲಾ ಪಂಚಾಯತ್ ಶಾಖಾ ಮುಖ್ಯಸ್ಥರೊಂದಿಗೆ ಪೂರ್ವಭಾವಿಯಾಗಿ ಸಭೆ ನಡೆಸಿ ಮಾತನಾಡಿದರು.

ಗ್ರಾಮ ಪಂಚಾಯತ್‌ಗಳ ತೆರಿಗೆ ವಸೂಲಾತಿ, ಆಸ್ತಿಗಳ ಸಮೀಕ್ಷೆ, ಇ-ಸ್ವತ್ತು ಮತ್ತು ಐ.ಪಿ.ಜಿ.ಆರ್.ಎಸ್. ಅರ್ಜಿಗಳ ವಿಲೇವಾರಿ ಮಾಹಿತಿ ಪಡೆದು ಆದ್ಯತೆ ಮೇರೆಗೆ ಕಾಲಮಿತಿಯೊಳಗೆ ಇ-ಸ್ವತ್ತು ಹಾಗೂ ಸಾರ್ವಜನಿಕ ಕುಂದು ಕೊರತೆ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಡಿಜಿಟಲ್ ಗ್ರಂಥಾಲಯಗಳ ನಿರ್ವಹಣೆ, ಇಲಾಖಾ ವಿಚಾರಣೆ ವಿವರ, 14 ಮತ್ತು 15ನೇ ಹಣಕಾಸಿನ ಪ್ರಗತಿ ಪರಿಶೀಲಿಸಿದರು.

ವಿಪತ್ತು ನಿರ್ವಹಣೆ

ಕಾವೇರಿ ಹಾಗೂ ಹೇಮಾವತಿ ನದಿ ಪಾತ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ಸದರಿ ನದಿಗಳ ಪಾತ್ರದಲ್ಲಿ ಬರುವ ಗ್ರಾಮ ಪಂಚಾಯತ್‌ಗಳಲ್ಲಿ ವಿಪತ್ತು ನಿರ್ವಹಣೆ ಸಂಬಂಧ ಅಗತ್ಯ ಕ್ರಮವಹಿಸುವಂತೆ ಈಗಾಗಲೇ ಸೂಚಿಸಲಾಗಿದ್ದು, ಅದರಂತೆ ಪ್ರವಾಹ ಪರಿಸ್ಥಿತಿ ಕಡಿಮೆಯಾಗುವವರೆಗೂ ಸಹ ನದಿ ಪಾತ್ರದ ಗ್ರಾಮ ಪಂಚಾಯತ್‌ಗಳಲ್ಲಿ ಎಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವಂತೆ ಪಿ.ಡಿ.ಓ.ಗಳಿಗೆ ನಿರ್ದೇಶನ ನೀಡುವಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.

ಮಹಾತ್ಮಗಾಂಧಿ ನರೇಗಾ ಯೋಜನೆ, ಜಲ ಜೀವನ್ ಮಿಷನ್ ಯೋಜನೆ, ಸ್ವಚ್ಛ ಭಾರತ್ ಮಿಷನ್(ಗ್ರಾ), ಬಾಪೂಜಿ ಸೇವಾ ಕೇಂದ್ರದ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲಿಸಿ ನಿಗಧಿತ ಅವಧಿಯಲ್ಲಿ ಪ್ರಗತಿ ಸಾಧಿಸಲು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳ ಹಂತದಲ್ಲಿ ಗ್ರಾ.ಪಂ. ಪಿ.ಡಿ.ಓ.ಗಳ ಸಭೆಯನ್ನು ಮಾನ್ಯ ಸಚಿವರ ನಿರ್ದೇಶನದಂತೆ ಪ್ರತಿ ಮಾಹೆಯ 4 ನೇ ತಾರೀಖಿನಂದು ಸಭೆ ನಡೆಸಿ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿವಾರು ಪ್ರಗತಿ ಪರಿಶೀಲಿಸಿ. ಸಭಾ ನಡವಳಿ ಹಾಗೂ ಅನುಪಾಲನಾ ವರದಿಯನ್ನು ೦೨ ದಿನಗಳೊಳಗಾಗಿ ಸಲ್ಲಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕ ಸಂಜೀವಪ್ಪ, ಉಪ ಕಾರ್ಯದರ್ಶಿಗಳಾದ ಆನಂದ್, ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!