Sunday, November 22, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರ| ಕೃಷಿ ಆಧಾರಿತ ಕೈಗಾರಿಕೆ ತರುವ ಕುರಿತು ತಜ್ಞರೊಂದಿಗೆ ಚರ್ಚೆ

ಮಂಡ್ಯ ಜಿಲ್ಲೆಯಲ್ಲಿ ಕೃಷಿ ಸಂಬಂಧಿತ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಉದ್ದೇಶದಿಂದ ಪಾಂಡವಪುರ ತಾಲ್ಲೂಕಿನ ಹರವು ಗ್ರಾಮದ ಪ್ರಾಚೀನ ಸ್ಮಾರಕ ರಾಮದೇವರ ದೇಗುಲ ಆವರಣದ ದೇವರಕಾಡು ಮಂಥನ ವೇದಿಕೆಯಲ್ಲಿ ಭಾನುವಾರ ತಜ್ಞರೊಂದಿಗೆ ಚರ್ಚೆ ನಡೆಯಿತು.

ಈ ಚರ್ಚೆಯಲ್ಲಿ ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆಗಳು , ನಿರುದ್ಯೋಗ , ಕೈಗಾರಿಕಾ ಅಭಿವೃದ್ಧಿಯ ಕುರಿತು ಆರೋಗ್ಯ ಪೂರ್ಣವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಡಾ.ಹೆಚ್.ಎಲ್.ರವೀಂದ್ರ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಮತ್ತು ತೆಂಗು ಆಧಾರಿತ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಸಂಬಂದ ತಜ್ಞರೊಂದಿಗೆ ಚರ್ಚೆ ನಡೆದಿದೆ, ಜಿಲ್ಲೆಯ ಯಾವ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಯಾಗಬೇಕು. ಎಂತಹ ಕೈಗಾರಿಕೆ ಅವಶ್ಯಕತೆ ಇದೆ ಎಂಬುದರ ಬಗ್ಗೆ ಚರ್ಚಿಸಿದ್ದೇವೆ, ಆ.12ರ ನಂತರ ನಮ್ಮ ಚರ್ಚೆಯ ಒಟ್ಟು ಅಂಶಗಳನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮುಂದಿಡಲಾಗುವುದು, ಕೇಂದ್ರ ಸಚಿವರು ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಆಸಕ್ತಿವಹಿಸಿದ್ದು, ಅದಕ್ಕೆ ಪೂರಕವಾಗಿ ನಾವು ಚರ್ಚೆ ನಡೆಸಿದ್ದೇವೆ ಎಂದರು.

ಚರ್ಚಾಗೋಷ್ಠಿಯಲ್ಲಿ ಮೈಸೂರು ಸಿ.ಎಫ್.ಟಿ.ಆರ್.ಐ ನ ಅನಿಲ್ ಕುಮಾರ್, ಪ್ರಗತಿಪರ ಚಿಂತಕ ನಾಗೇಗೌಡ ಸೇರಿದಂತೆ ಹಲವು ಪ್ರಗತಿಪರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ