Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮಾರಗೌಡನಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಪುಟ್ಟರಾಜು ಆಯ್ಕೆ

ಮಂಡ್ಯ ತಾಲೂಕಿನ ಮಾರಗೌಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಜೆಡಿಎಸ್, ಕಾಂಗ್ರೆಸ್ ಬೆಂಬಲಿತ ಪುಟ್ಟರಾಜು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅಧ್ಯಕ್ಷ ಎಂ ಡಿ ರಮೇಶ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಪುಟ್ಟರಾಜುರನ್ನು ಹೊರತುಪಡಿಸಿ ಬೇರೆ ಯಾರು ನಾಮಪತ್ರವನ್ನು ಸಲ್ಲಿಸದ ಕಾರಣ ಪುಟ್ಟರಾಜು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾದ ಗಿರೀಶ್ ಘೋಷಿಸಿದರು.

ನೂತನ ಅಧ್ಯಕ್ಷ ಪುಟ್ಟರಾಜು ಮಾತನಾಡಿ , ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರು ಅವಿರೋಧ ಆಯ್ಕೆಗೆ ಶ್ರಮಿಸಿದ್ದು, ನನ್ನ ಬಹುದಿನಗಳ ಕನಸು ನನಸಾಗಿದೆ ಅದೇ ರೀತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನರ ಶಿಕ್ಷಣ, ಆರೋಗ್ಯ ಮತ್ತು ರಸ್ತೆಗಳ ಅಭಿವೃದ್ಧಿಗೆ ಪೂರಕವಾಗಿ ಕಾರ್ಯಕ್ರಮ ರೂಪಿಸಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಶ್ರಮಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಪುಟ್ಟರಾಜು ರವರನ್ನು ಗ್ರಾಮ ಪಂಚಾಯಿತಿ ಸದಸ್ಯರಾದ ಯಶೋದಮ್ಮ, ಸಿ ದಿವ್ಯ, ನಾಗರಾಜು, ಗೌರಮ್ಮ, ಶೋಭಾ, ರಮೇಶ್, ವರದರಾಜು, ಪದ್ಮ, ಎಸ್ ಕೆ ಲೋಕೇಶ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದು, ಸನ್ಮಾನಿಸಿ ಶುಭಕೋರಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ