Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ : ಶಾಸಕ ಪಿ‌.ಎಂ.ನರೇಂದ್ರಸ್ವಾಮಿಗೆ ಪಿತೃ ವಿಯೋಗ

ಮಳವಳ್ಳಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ತಂದೆ ಪಿ.ಎನ್.ಮಲ್ಲಯ್ಯ (93 ವರ್ಷ) ಅವರು ವಯೋಸಹಜ ಕಾಯಿಲೆಯಿಂದ ಸೋಮವಾರ ಮಧ್ಯರಾತ್ರಿ ನಿಧನರಾದರು.

ಮಲ್ಲಯ್ಯ ಅವರು ತಾಲ್ಲೂಕು ಬೋರ್ಡ್ ಸದಸ್ಯರಾಗಿ, ಪೂರಿಗಾಲಿ ಗ್ರಾಮ ಪಂಚಾಯತಿ, ಹಾಲು ಉತ್ಪಾದಕರ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮೃತ ಪಿ.ಎಂ.ಮಲ್ಲಯ್ಯ ಅವರು ಪತ್ನಿ ಮಹದೇವಮ್ಮ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅವರ ಅಂತ್ಯಸಂಸ್ಕಾರವು ಸ್ವಗ್ರಾಮವಾದ ಮಳವಳ್ಳಿಯ ಪೂರಿಗಾಲಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ