Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಹ‌ರ್ ಘರ್ ತಿರಂಗಾ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಿ: ಶೇಖ್ ತನ್ವೀರ್ ಆಸಿಫ್

2024ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಡ್ಯ ಜಿಲ್ಲೆಯಲ್ಲಿ ಹ‌ರ್ ಘರ್ ತಿರಂಗಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದು, ಬಹಳ ಅದ್ದೂರಿಯಾಗಿ ಕಾರ್ಯಕ್ರಮವನ್ನು ಆಚರಿಸಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವಿರ್ ಆಸಿಫ್ ತಿಳಿಸಿದರು.

ಸುವರ್ಣ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ “ಹರ್ ಘರ್ ತಿರಂಗಾ” ಕಾರ್ಯಕ್ರಮವನ್ನು ಆಯೋಜಿಸುವ ಸಂಬಂಧ ಪೂರ್ವ ಸಿದ್ಧತಾ ಕ್ರಮಗಳ ಕುರಿತು ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂಬಂಧ ತಿರಂಗಾ ಯಾತ್ರೆ ರ್‍ಯಾಲಿ ಮತ್ತು ಮ್ಯಾರಾಥಾನ್ ಕಾರ್ಯಕ್ರಮಗಳನ್ನು ಮಂಡ್ಯ ಜಿಲ್ಲೆ ಮತ್ತು ನಗರ ವ್ಯಾಪ್ತಿಯಲ್ಲಿ ಆಯೋಜಿಸಲು ನಗರಸಭೆ ಹಾಗೂ ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿಗಳು, ಆಯುಕ್ತರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಎಲ್ಲಾ ಮುಖ್ಯಾಧಿಕಾರಿಗಳು ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಹರ್ ಘರ್ ತಿರಂಗಾ ಅಭಿಯಾನದಂತೆ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ಮಾಡಿ ಮನೆಗಳು / ಸರ್ಕಾರಿ ಕಛೇರಿಗಳು ಹಾಗೂ ಶಾಲಾ ಕಾಲೇಜು / ಶಿಕ್ಷಣ ಸಂಸ್ಥೆಗಳ ಮೇಲೆ ರಾಷ್ಟ್ರಧ್ವಜವನ್ನು ನಿಯಮಾನುಸಾರ ಹಾರಿಸಬೇಕು. ಸೂಚಿತ ವೆಬ್ ಸೈಟ್:hargartiranga.com ರಲ್ಲಿ ಸೆಲ್ಸಿಗಳನ್ನು ಅಪ್ ಲೋಡ್ ಮಾಡುವುದು ಕಡ್ಡಾಯ ಎಂದರು.

ಜಾಥಾ ಕಾರ್ಯಕ್ರಮ ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂಬಂಧ ಪ್ರತಿ ಶಾಲಾ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಸೈಕಲ್ ಜಾಥಾ/ಬೈಕ್, ಪಾರಂಪರಿಕ ನಡಿಗೆ ಹಾಗೂ ಗಾಳಿಪಟ ಹಾರಿಸುವ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಕ್ರಮವಹಿಸಿ. ಜೊತೆಗೆ ತಿರಂಗಾ ಸಂಗೀತಾ ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಮುಖಾಂತರ ನಡೆಸಬೇಕು ಎಂದು ತಿಳಿಸಿದರು.

ಎಲ್ಲಾ ತಹಶೀಲ್ದಾರರು ಸ್ವಾತಂತ್ರ್ಯ ಯೋಧರಿಗೆ ಸನ್ಮಾನ ಕುರಿತು ಜಿಲ್ಲೆಯಲ್ಲಿ ಹಾಲಿ ಜೀವಿತ ಸ್ವಾತಂತ್ರ್ಯ ಯೋಧರಿಗೆ ಮನೆಗೆ ತೆರಳಿ ಸನ್ಮಾನ ಮಾಡಲು ಅಗತ್ಯ ಕ್ರಮವಹಿಸುವಂತೆ ತಿಳಿಸಿದರು. ವಿಶ್ವವಿದ್ಯಾಲಯಗಳಲ್ಲಿ ಹರ್ ಘರ್ ತಿರಂಗಾ ಸಂಬಂಧ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಪ್ರತಿಜ್ಞಾವಿಧಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಜಿಲ್ಲೆಯ ಎಲ್ಲಾ ಸರ್ಕಾರಿ / ನಿಗಮ ಮಂಡಳಿ, ಪ್ರಾಧಿಕಾರ ಹಾಗೂ ಇತರ ಕಾರ್ಯಾಲಯಗಳು, ಶಾಲಾ ಕಾಜೇಜುಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕಾರ ಮಾಡಬೇಕು ಎಂದರು. ಸೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್.ಸಿ.ಸಿ ವಿದ್ಯಾರ್ಥಿಗಳ ತಂಡದಿಂದ ತಿರಂಗಯಾತ್ರೆ ನಡೆಸಬೇಕು ಎಂದರು.

ವಿವಿಧ ಸ್ಪರ್ಧೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಆಶುಭಾಷಣಾ ಸ್ಪರ್ಧೆ, ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ರಂಗೋಲಿ ಸ್ಪರ್ಧೆ ಹಾಗೂ ಸಂಬಂಧಿತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವೆಬ್ ಸೈಟ್:hargartiranga.com ರಲ್ಲಿ ಅಪ್ ಲೋಡ್ ಮಾಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ