ಮಂಡ್ಯ ನಗರದ ಪಿಡಬ್ಲ್ಯೂಡಿ ಕಛೇರಿ ಆವರಣದಲ್ಲಿ ಗುತ್ತಿಗೆದಾರರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಮಂಡ್ಯ ಜಿಲ್ಲೆ ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ಕರ್ನಾಟಕ ಸರ್ಕಾರದ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಭಿನಂದನಾ ಸಮಾರಂಭ ಜರುಗಿತು.
ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದು 1 ವರ್ಷ 2 ತಿಂಗಳುಗಳು ಕಳೆದಿವೆ. ಪಿ ಡಬ್ಲ್ಯೂ ಡಿ ಕಚೇರಿಯಲ್ಲಿ ಇರುವಂತಹ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸಲಾಗುವುದು ಎಂದರು. ಮಂಡ್ಯ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಯತಿರಾಜು.ಎಂ.ಹೆಚ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಿ. ಡಬ್ಲ್ಯೂ.ಡಿ ವಿಭಾಗದ ಕಾರ್ಯಪಾಲಕ ಅಭಿಯಂತರ ಹರ್ಷ.ಹೆಚ್. ಆರ್., ಸಿ.ಎನ್.ಎನ್. ಎಲ್. ವಿ. ಸಿ. ವಿಭಾಗದ ಕಾರ್ಯಪಾಲಕ ಅಭಿಯಂತರ ನಂಜುಂಡೇಗೌಡ,ತಾ.ಪಂ.ಮಾಜಿ ಅಧ್ಯಕ್ಷ ತ್ಯಾಗರಾಜು ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಗುತ್ತಿಗೆದಾರರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ. ಟಿ. ಹನುಮಂತು, ನಿರ್ದೇಶಕರಾದ ಮಂಜುನಾಥ್ ಎಸ್. ಜೆ. ನವೀನ್ ಕುಮಾರ್ ಜಿ.ಬಿ ಸೇರಿದಂತೆ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.




