Friday, September 20, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ಜೀವನ್ ಮಿಷನ್ ಸದುಪಯೋಗಕ್ಕೆ ಶಾಸಕರ ಸಲಹೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಜಲ ಜೀವನ್ ಮಿಷನ್ ಯೋಜನೆಯಡಿ ತಾಲ್ಲೂಕಿನ ಗ್ರಾಮೀಣ ಭಾಗದ ಮನೆ ಮನೆಗೂ ನಲ್ಲಿ ಸಂಪರ್ಕದ ಮೂಲಕ ಶುದ್ದ ಕುಡಿಯುವ ನೀರು ಪೂರೈಸಲು ಸಲುವಾಗಿ ಚಾಲನೆ ನೀಡಿದ್ದೇವೆ, ಈ ಯೋಜನೆಯನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಹೆಚ್. ಟಿ ಮಂಜು ಹೇಳಿದರು.

ಕೆ.ಆರ್.ಪೇಟೆ ತಾಲ್ಲೂಕಿನ ಕಸಬಾ ಹೋಬಳಿಯ ಅನುವಿನಕಟ್ಟೆ ಮತ್ತು ಬಂಡಬೊಯೀನಹಳ್ಳಿ ಗ್ರಾಮಗಳಲ್ಲಿ ಗುದ್ದಲಿ ಪೂಜೆ ಮೂಲಕ ಚಾಲನೆ ನೀಡಿ ಮಾತನಾಡಿದರು. ಕ್ಷೇತ್ರದ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸಲು ಸದಾ ಬದ್ಧವಾಗಿರುತ್ತೇವೆ ಎಂದು ತಿಳಿಸಿದರು.

ಜಲಜೀವನ್ ಮಿಷನ್ ಯೋಜನೆಯು ಉತ್ತಮವಾಗಿದೆ ಇದರ ಮೂಲಕ ನೀರಿಗೆ ಪರದಾಡುವುದನ್ನು ತಪ್ಪಿಸಿ, ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು.ಈ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕಾದರೆ ಸ್ಥಳೀಯ ಜನರ ಸಹಕಾರ ಅಗತ್ಯ ಎಂದರು.

ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದ ವಿಚಾರದಲ್ಲಿ ಸ್ಥಳೀಯರು ಯಾವುದೇ ರಾಜಕೀಯ ಬೆರೆಸಬಾರದು. ಹಾಗಾಗಿ ಸಾರ್ವಜನಿಕರು ಗುಣಮಟ್ಟದ ಕಾಮಗಾರಿಗೆ ಹೆಚ್ಚು ಸೂಚಿಸಿ.ಮುಂದೆ ಬೇಸಿಗೆ ಕಾಲದಲ್ಲಿ ಕುಡಿಯುವ ಹೆಚ್ಚು ಅಭಾವ ಬರಬಹುದು ಹಾಗಾಗಿ ವೇಗವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಗ್ರಾಮದವರ ಸಹಕಾರದೊಂದಿಗೆ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ನಾನು ಬದ್ದನಾಗಿದ್ದೇನೆ. ಮೊದಲಬಾರಿ ಶಾಸಕನಾಗಿದ್ದೇನೆ. ಹಾಗಾಗಿ ಜನರ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಸಹಾಯಕ ಕಾರ್ಯಕ ಅಭಿಯಂತರರಾದ ರಶ್ಮಿ,ಸಹಾಯಕ ಇಂಜಿನಿಯರ್ ಪ್ರವೀಣ್,ಅಗ್ರಹಾರ ಬಾಚಹಳ್ಳಿ ಗ್ರಾ.ಪಂ ಅಧ್ಯಕ್ಷ ದಿವಿ ಕುಮಾರ್,ಪುರಸಭಾ ಸದಸ್ಯ ಹೊಸಹೊಳಲು ಅಶೋಕ್ ಕುಮಾರ್, ಮಾಜಿ ಸದಸ್ಯ ಹೇಮಂತ್ ಕುಮಾರ್, ಅನುವಿನಕಟ್ಟೆ ಗ್ರಾ.ಪಂ ಸದಸ್ಯ ಪಯಾಜ್ ಹುಲ್ಲ ಖಾನ್,ಗ್ರಾ.ಪಂ ಮಾಜಿ ಅಧ್ಯಕ್ಷ ಎ.ವಿ ರಾಮಕೃಷ್ಣೇಗೌಡ ಸೇರಿದಂತೆ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!