Sunday, November 22, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು| ಅಪಘಾತದಲ್ಲಿ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಡಿ.ಸಿ.ತಮ್ಮಣ್ಣ

ಅಪಘಾತದಲ್ಲಿ ಗಾಯಗೊಂಡವರನ್ನ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ಕಳುಯಿಸಿ ತಾವು ಸ್ಕೂಟರ್ ಏರಿ ಚಿಕಿತ್ಸೆ ಕೊಡಿಸಲು ನೆರವಾದ ಪ್ರಸಂಗ ಮದ್ದೂರು ತಾಲ್ಲೂಕಿನ ಭಾರತೀನಗರ ಸಮೀಪದ ತಿಟ್ಟಮಾರನಹಳ್ಳಿ ಗೇಟ್ ಬಳಿ ಇಂದು ನಡೆದಿದೆ.

ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಳವಳ್ಳಿ ತಾಲ್ಲೂಕಿನ ಕೋರೆಗಾಲದ ಮರಿತಾಯಮ್ಮ ಮತ್ತು ಮೊಮ್ಮಗ ವೈದಿಕ್ ಗೌಡ ಅವರಿಗೆ ಹಿಂದಿನಿಂದ ಬಂದ ಸ್ಕೂಟರ್ ನಿಯಂತ್ರಣ ತಪ್ಪಿ (ಬೈಕ್ ಸವಾರ ದೊಡ್ಡ ಆಲಹಳ್ಳಿ ಹೇಮಂತ್) ಡಿಕ್ಕಿ ಹೊಡೆದ ಪರಿಣಾಮ ಬೈಕಿನ ಹಿಂಬದಿಯಲ್ಲಿ ಕುಳಿತ್ತಿದ್ದ ದೊಡ್ಡಆಲಹಳ್ಳಿ ಸವಿತಾ ಅವರು ಸೇರಿ 4 ಮಂದಿಯು ಸ್ಥಳದಲ್ಲಿಯೇ ನೆಲಕ್ಕೆ ಕುಸಿದು ಬಿದ್ದಿದ್ದರು.

ಅದೇ ಮಾರ್ಗದಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತಮ್ಮ ಕಾರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರು. ರಸ್ತೆ ಬದಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದ ಗಾಯಾಳುಗಳನ್ನು ಕಂಡ ತಕ್ಷಣ ಕಾರನ್ನು ನಿಲ್ಲಿಸಿ, ಕೆಳಗಿಳಿದು ಗಾಯಾಳುಗಳನ್ನು ತಮ್ಮದೆ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿ ಸಂಬಂಧಿಸಿದ ವೈದ್ಯರಿಗೆ ದೂರವಾಣಿ ಕರೆ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿ ಮಾನವೀಯತೆ ಮೆರೆದಿದ್ದಾರೆ.

ಆಸ್ಪತ್ರೆಗೆ ಕಾರನ್ನು ಕಳುಹಿಸಿದ ನಂತರ ತಿಟ್ಟಮಾರನಹಳ್ಳಿ ಮಾರ್ಗದಲ್ಲಿ ತೆರಳುತ್ತಿದ್ದ ಬೈಕ್ ಸವಾರನ ಜೊತೆ ಹಿಂದಿನ ಸೀಟಿನಲ್ಲಿ ಕುಳಿತು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಲು ತೆರಳಿದರು.

ಕೋರೆಗಾಲದ ಮರಿತಾಯಮ್ಮ(45) ಅವರಿಗೆ ಕಾಲಿನ ಮೂಳೆ ಮುರಿದಿದ್ದು, ಮೊಮ್ಮಗ ವೈದಿಕ್ ಗೌಡ(6) ಅವರಿಗೆ ತಲೆಗೆ ಪೆಟ್ಟು ಬಿದ್ದಿದೆ. ಬೈಕಿನಲ್ಲಿದ್ದ ಸವಿತಾ(46) ಮತ್ತು ಹೇಮಂತ್(25) ಅವರು ಗಂಭೀರವಾಗಿ ಗಾಯಗೊಂಡ ಪರಿಣಾಮ, ಜೆಡಿಎಸ್ ಕಾರ್ಯಕರ್ತ ಅಣ್ಣೂರು ವಿನುಕುಮಾರ್ ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ