Friday, September 20, 2024

ಪ್ರಾಯೋಗಿಕ ಆವೃತ್ತಿ

ರಾಜ್ಯಪಾಲರ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ: ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಧೋರಣೆಯ ವಿರುದ್ಧ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. “ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಯಾವುದೇ ಪಾತ್ರವಿಲ್ಲ. ಆದರೂ, ಬೇಕಂತಲೇ ಅಕ್ರಮವೆಂದು ಅವರ ವಿರುದ್ಧ ಎತ್ತಿ ಕಟ್ಟಲಾಗುತ್ತಿದೆ. ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ” ಎಂದು ಆರೋಪಿಸಿದ್ದಾರೆ.

“ಸೋಮವಾರ ರಾಜ್ಯದ ಎಲ್ಲ ಭಾಗಗಳಲ್ಲಿಯೂ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ. ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಯಲಿದೆ. ಕೆಲವು ಕಿಡಿಗೇಡಿಳು ಪ್ರತಿಭಟನೆಗೆ ನುಗ್ಗಿ ಗಲಭೆ ಎಬ್ಬಿಸುವ ಸಾಧ್ಯತೆಗಳಿದ್ದು, ಅದರ ಬಗ್ಗೆ ಎಚ್ಚರದಿಂದ ಇರುವಂತೆ ಪಕ್ಷದ ಮುಖಂಡರಿಗೆ ಸೂಚಿಲಾಗಿದೆ” ಎಂದು ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!