ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ನಿರ್ಧಾರದ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯನವರ ಬೆಂಬಲಿಗ ಹಾಗೂ ಸಾಮಾಜಿಕ ಕಾರ್ಯಕರ್ತರೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದಿದೆ.
ಮೃತಪಟ್ಟ ಸಾಮಾಜಿಕ ಕಾರ್ಯಕರ್ತ ಹಾಗೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದ ಬೆಂಗಳೂರಿನ ಸಿ ಕೆ ರವಿಚಂದ್ರನ್ (63) ಎಂದು ಗುರುತಿಸಲಾಗಿದೆ.
ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ನಿರ್ಧಾರದ ಬಗ್ಗೆ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘದಿಂದ ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಸಿ ಕೆ ರವಿಚಂದ್ರನ್ ಎನ್ನುವವರು ಹೃದಯಾಘಾಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. pic.twitter.com/rdmuofsdwe
— eedina.com ಈ ದಿನ.ಕಾಮ್ (@eedinanews) August 19, 2024
“>
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘದಿಂದ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ವೇಳೆ ಸಂಘಟನೆಯಿಂದ ಬಂದಿದ್ದವರನ್ನು ಹೆಸರೆತ್ತಿ, ಸಿ ಕೆ ರವಿಚಂದ್ರನ್ ಮಾಧ್ಯಮದವರಿಗೆ ಪರಿಚಯ ಪಡಿಸುತ್ತಿದ್ದರು. ಈ ವೇಳೆಯಲ್ಲಿಯೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ಸುದ್ದಿಗೋಷ್ಠಿಯಲ್ಲಿದ್ದ ಈ ದಿನ.ಕಾಮ್ ಕ್ಯಾಮೆರಾಮನ್ ದೇವರಾಜ್ ರಾಯಭಾಗಿ ಮಾಹಿತಿ ನೀಡಿದ್ದಾರೆ.
ಹೃದಯಾಘಾತಕ್ಕೊಳಗಾದ ಕೂಡಲೇ ಆಟೋದಲ್ಲಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಕೂಡಲೇ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸಿ ಕೆ ರವಿಚಂದ್ರನ್ ಅವರು ಕಾಂಗ್ರೆಸ್ ಪಕ್ಷ ಸೇರಿದಂತೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು.