Friday, September 20, 2024

ಪ್ರಾಯೋಗಿಕ ಆವೃತ್ತಿ

ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಶೇ.25ರಷ್ಟು ಹೆಚ್ಚಳ| ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಆದೇಶ

ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯವೇತನವನ್ನು ಶೇ.25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿ ಹಂಚಿಕೊಂಡಿರುವ ಅವರು, “ಶಿಷ್ಯವೇತನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರಕ್ಕೆ ಕರೆನೀಡಿದ್ದರು. ಪರಿಷ್ಕೃತ ವೇತನವ ಆಗಸ್ಟ್ 1ರಿಂದಲೇ ಜಾರಿಗೆ ಬಂದಿದ್ದು, ಶೇ.25ರಷ್ಟು ಹೆಚ್ಚಳವಾಗಲಿದೆ. ಸರ್ಕಾರ ಶಿಷ್ಯವೇತನ ಹೆಚ್ಚಳ ಮಾಡಿದ ಬೆನ್ನಲ್ಲೇ ವೈದ್ಯರು ಮುಷ್ಕರನ್ನು ಹಿಂಪಡೆದಿದ್ದಾರೆ” ಎಂದು ಹೇಳಿದ್ದಾರೆ.

ಪರಿಷ್ಕೃತ ವೇತನ

ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು:
ಕೋರ್ಸ್‍ಗಳು – ಮಾಸಿಕ ವೇತನ
1ನೇ ವರ್ಷ – ರೂ. 45,000 ದಿಂದ 56,250
2ನೇ ವರ್ಷ- ರೂ. 50,000 ದಿಂದ 62,500
3ನೇ ವರ್ಷ- ರೂ. 55,000 ದಿಂದ 68,750

ಸೂಪರ್ ಸ್ಪೆಷಾಲಿಟಿ ವೈದ್ಯ ವಿದ್ಯಾರ್ಥಿಗಳು:
ಕೋರ್ಸ್‍ಗಳು – ಮಾಸಿಕ ವೇತನ
1ನೇ ವರ್ಷ – ರೂ. 55,000 ದಿಂದ 68,750
2ನೇ ವರ್ಷ- ರೂ. 60,000 ದಿಂದ 75,000
3ನೇ ವರ್ಷ- ರೂ. 65,000 ದಿಂದ 81,250

ಸೀನಿಯರ್ ರೆಸಿಡೆಂಟ್ಸ್ – ರೂ. 60,000 ದಿಂದ 75,000

ಮಂಜೂರಾದ ಸೀಟುಗಳು
ಸ್ನಾತಕೋತ್ತರ 3,540
ಸೂಪರ್ ಸ್ಪೆಷಾಲಿಟಿ 445
ಸೀನಿಯರ್ ರೆಸಿಡೆಂಟ್ 527
ಒಟ್ಟು 4,312 ಸೀಟುಗಳು

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ

“ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆ ನಡೆಸಿದೆ” ಎಂದಿದ್ದಾರೆ.

ಶುಕ್ರವಾರ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ಶರಣ ಪ್ರಕಾಶ್ ಪಾಟೀಲ್ ಅವರು ವೈದ್ಯಕೀಯ ಶಿಕ್ಷಣ ನಿರ್ದೇಶಕರರಾದ ಡಾ. ಸುಜಾತ ರಾಥೋಡ್ ಅವರಿಗೆ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು/ಪಾಲುದಾರರನ್ನು ಸಂಪರ್ಕಿಸಿ ಸಮಗ್ರವಾದ ಮಾರ್ಗಸೂಚಿಯನ್ನು ರಚಿಸುವಂತೆ ಸೂಚಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!