Sunday, November 22, 2026

ಪ್ರಾಯೋಗಿಕ ಆವೃತ್ತಿ

ಸಹಕಾರಿ ಸಂಘಗಳು ಸರ್ವರಿಗೂ ಸಮಪಾಲು ದೊರಕಿಸುತ್ತಿವೆ: ಅನಿತಾ

ಇಂದಿನ ದಿನಗಳಲ್ಲಿ ಸೌಹಾರ್ದ ಸಹಕಾರಿ ಸಂಘಗಳು ಸರ್ವರಿಗೂ ಸಮಪಾಲನ್ನು ದೊರಕಿಸಿ ಕೊಡುವುದರಲ್ಲಿ ಅತ್ಯಂತ ಸಕ್ರಿಯವಾಗಿ ಕೆಲಸ ಮಾಡುತ್ತಿವೆ ಎಂದು ಮಂಡ್ಯ ಜಿಲ್ಲೆಯ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಕೆ.ಅನಿತಾ ತಿಳಿಸಿದರು.

ಮದ್ದೂರು ತಾಲ್ಲೂಕಿನ ಭಾರತೀನಗರದಲ್ಲಿ ವಂಶಿ ಸೌಹಾರ್ದ ಸಹಕಾರಿ ಸಂಘ (ರಿ)ದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮನುಷ್ಯನ ಆರ್ಥಿಕ ಬೆಳವಣಿಗೆಗೆ ಸಹಕಾರ ಸಂಘಗಳು ಹೆಮ್ಮರವಾಗಿ ನಿಂತು ಸಹಾಯ ಮಾಡುತ್ತಿವೆ. ವ್ಯಕ್ತಿಗಳ ಆರ್ಥಿಕ ಸ್ಥಿತಿಯನ್ನು ಸುಧಾರಣೆಗೊಳಿಸುವಲ್ಲಿ ಸಹಕಾರಿ ಸಂಘಗಳು ಅತ್ಯಂತ ಮಹತ್ವವಾದ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ಬಿ. ಸಿದ್ದಯ್ಯ ಅಧ್ಯಕ್ಷತೆ ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ಹಿರಿಯ ಲೆಕ್ಕಪರಿಶೋಧಕ ಎನ್. ರವಿ ಕುಮಾರ್ ಗಣಕಯಂತ್ರ ಉದ್ಘಾಟಿಸಿದರು. ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಬಿ.ಜೆ ಗುರುರಾಜ್ ಭಾಗವಹಿಸಿದ್ದರು.

ಷೇರುದಾರರಾದ ಎಂ. ಮಾಯಪ್ಪ ಅತಿಥಿಗಳನ್ನು ಸ್ವಾಗತಿಸಿದರು. ಟಿ.ಎಸ್. ಮೋಹನ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿ ವಂದನಾರ್ಪಣೆ ಮಾಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ