Thursday, November 19, 2026

ಪ್ರಾಯೋಗಿಕ ಆವೃತ್ತಿ

ಕಾರಾಗೃಹದಲ್ಲಿರುವ ಖೈದಿಗಳಿಗೆ ಪಂಚತಾರ ವ್ಯವಸ್ಥೆ: ಹೆಚ್.ಡಿ.ಕುಮಾರಸ್ವಾಮಿ

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಖೈದಿಗಳಿಗೆ ಪಂಚತಾರ ವ್ಯವಸ್ಥೆ ಇದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

ಮಂಡ್ಯ ಜಿಲ್ಲಾ ಪಂಚಾಯತಿಯ ಕಾವೇರಿ ಸಭಾಂಗಣದಲ್ಲಿ ನಡೆದ ದಿಶಾ ಸಭೆಗೂ ಆರಂಭಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು,ನಟ ದರ್ಶನ್ ಅವರಿಗೆ ಜೈಲಿನಲ್ಲಿ ಹೈಟೆಕ್ ವ್ಯವಸ್ಥೆ ಮಾಡಲಾಗಿದೆ.

ಜೈಲಿನ ವ್ಯವಸ್ಥೆ ಹೊಸದಾಗಿ ಈಗ ಆಗಿಲ್ಲ. ಇದು ಹಿಂದಿನಿಂದಲೂ ನಡೆಯುತ್ತಿದೆ. ಈ ವಿಚಾರವಾಗಿ ಈ
ಹಿಂದೆ ಡಿಜಿ ಮತ್ತು ಡಿಸಿಪಿ ನಡುವೆ ದೊಡ್ಡ ಗಲಾಟೆ ಆಗಿತ್ತು. ಆರೋಪಿಗಳಿಗೆ ಸಿಗುವ ಹೈಟೆಕ್ ಸೌಲಭ್ಯಗಳ ಬಗ್ಗೆ
ತನಿಖೆ ನಡೆಯಬೇಕು ಎಂದು ಗಲಾಟೆ ಆಗಿತ್ತು. ಈಗ ದರ್ಶನ್ ಗೆ ನೀಡಿರುವ ಹೈಟೆಕ್ ವ್ಯವಸ್ಥೆಯಿಂದಾಗಿ ಪ್ರಚಾರಕ್ಕೆ ಬಂದಿದೆ. ಸರ್ಕಾರ ಆರೋಪಿಗಳನ್ನು‌ ಬೇರೆ ಕಡೆಗೆ ವರ್ಗಾಯಿಸಬೇಕು ಎಂದು‌ ತೀರ್ಮಾನ ಮಾಡ್ತಾ ಇದ್ಯಂತೆ. ಈ ಸರ್ಕಾರದ ಮೇಲೆ ಜನರಿಗೆ ನಂಬಿಕೆ ಬರಲು ಸಾಧ್ಯ ಇಲ್ಲ ಎಂದರು.

ರಾಜ್ಯದಲ್ಲಿ ಸರ್ಕಾರವೇ ಇಲ್ಲ

ರಾಜ್ಯದಲ್ಲಿ ಆಡಳಿತ ನಡೆಯುತ್ತಿಲ್ಲ. ಭ್ರಷ್ಟಾಚಾರದ ಬಗ್ಗೆ ಬೀದಿ ಬೀದಿಯಲ್ಲಿ ಜನರು ಮಾತಾಡುತ್ತಿದ್ದಾರೆ.
ಸರ್ಕಾರದಲ್ಲಿ‌ ಮಂತ್ರಿಗಳಿಗೆ ಕೆಲಸವಿಲ್ಲ. ಸಿಎಂಗೆ ಅವರ ಹಗರಣ ಬಗ್ಗೆ ಮಾತಾಡಲು ಸಮಯ ಸಾಕಾಗುತ್ತಿಲ್ಲ.
ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ ಎಂದು ವ್ಯಂಗ್ಯವಾಡಿದರು.

ದುಡ್ಡಿದ್ರೆ ಏನು ಬೇಕಾದರೂ ಕೊಂಡುಕೊಳ್ಳಬಹುದು

ಕೊಲೆಯಾಗಿರುವ ರೇಣುಕಾಸ್ವಾಮಿ ಕುಟುಂಬಸ್ಥರು ಅವರ ನೋವು ಹೇಳಿಕೊಳ್ಳುತ್ತಾರೆ. ಗೃಹ ಸಚಿವಪರಮೇಶ್ವರ್ ಅವರು ಪ್ರತಿ ದಿನ ಒಂದೊಂದು ಕಥೆ ಹೇಳ್ತಾರೆ. ಪಾರದರ್ಶಕವಾದ ಸರ್ಕಾರ ಮಾಡ್ತಾ ಇದೀನಿ. ನಮ್ಮದು‌ ಹೈಟೆಕ್ ಸರ್ಕಾರ ಅಂತಾರೆ. ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿಗಳಿಗೆ ಕೊಡ್ತಾ ಇರುವುದೇ ಹೈಟೆಕ್ ಸೌಲಭ್ಯ.
ಅವರು ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳಲು ಡೈವರ್ಟ್ ಮಾಡ್ತಾ ಇದ್ದಾರೆ. ಅಧಿಕಾರಿಗಳಿಂದ‌ ನ್ಯಾಯ ದೊರಕಲ್ಲ. ನ್ಯಾಯಾಲಯದಿಂದ‌ ನ್ಯಾಯ ದೊರಬೇಕು. ಇದಕ್ಕೆ ಸರ್ಕಾರವೇ ಹೊಣೆ ಆಗಬೇಕು. ಆದರೆ ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ವ್ಯಂಗ್ಯವಾಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ