Wednesday, November 18, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರ| ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಪಾಂಡವಪುರದ ಪ್ರಗತಿ ಸೇವಾ ಟ್ರಸ್ಟ್ (ರಿ) ಸಂಸ್ಥೆ, ಸರ್ಕಾರಿ ಪ್ರೌಢಶಾಲೆ ರಾಗಿಮುದ್ದನಹಳ್ಳಿ ವತಿಯಿಂದ 2023-24 ನೇ ಸಾಲಿನಲ್ಲಿ SSLC ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಾದ ಪ್ರವೀಣ್, ಅನಿತಾ ಮತ್ತು ಸುನೀತಾಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಪ್ರಗತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ.ನಾಗೇಶ್ ರಾಗಿಮುದ್ದನಹಳ್ಳಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷವೂ ಇಂತಹ ಕಾರ್ಯಕ್ರಮಗಳನ್ನು ನಮ್ಮ ಸಂಸ್ಥೆಯಿಂದ ಮಾಡಲಾಗುವುದು. ನನ್ನೂರಿನ ಶಾಲೆಯ ಮಕ್ಕಳು ಉತ್ತಮ ಸ್ಥಾನಕ್ಕೇರಬೇಕು. ನಮ್ಮ ಸಂಸ್ಥೆ ಆರೋಗ್ಯ, ಶಿಕ್ಷಣ ಮತ್ತು ಪರಿಸರಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದೇವೆ. ಹದಿನಾರು ವರ್ಷಗಳಿಂದ ತಾಲ್ಲೂಕು ಮಟ್ಟದಲ್ಲಿ ಪ್ರತಿಭಾ ಪುರಸ್ಕಾರ ನೀಡುತ್ತಿದ್ದೆವು. ಈ ವರ್ಷದಿಂದ ಪ್ರತಿವರ್ಷ ನಮ್ಮೂರಿನ ಪ್ರತಿಭಾವಂತರಿಗೆ ಗೌರವಿಸುವುದಾಗಿ ತಿಳಿಸಿದರು. ನಿಮ್ಮಿಂದ ಆರೋಗ್ಯ ಸಮಾಜ ನಿರ್ಮಾಣವಾಗಬೇಕಾಗಿದೆ. ಸಮಾಜದಲ್ಲಿ ಉತ್ಕೃಷ್ಟವಾದ ಸಾಧನೆಯ ಮೂಲಕ ಸಾರ್ವಜನಿಕರಿಗೆ ಸಹಾಯ ಮಾಡುವಂತೆ ಕರೆ ನೀಡಿದರು.

ಮುಖ್ಯ ಅತಿಥಿಗಳಾದ ಡಾ.ಬಿ.ಸಿ.ವಿಜಯಕುಮಾರ್ ಬಲ್ಲೇನಹಳ್ಳಿ, ಮಾತನಾಡಿ ವಿದ್ಯಾರ್ಥಿಗಳು ನಿರಂತರ ಅಧ್ಯಯನದ ಮೂಲಕ ಸಾಧನೆ ಮಾಡಬೇಕು. ಸಾಮಾಜಿಕ ಜಾಲತಾಣಗಳ ಬಳಕೆಯಿಂದ ದೂರವಿರಿ. ಆಧುನಿಕ ಆಕರ್ಷಣೆಗೆ ಒಳಗಾಗದೆ ಶ್ರದ್ಧೆ ಮತ್ತು ಆಸಕ್ತಿಯಿಂದ ವ್ಯಾಸಂಗ ಮಾಡಲು ಕರೆ ಕೊಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ನಿರ್ಮಲ, ಗುಮ್ಮನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ರಘು, ಸದಸ್ಯ ಚಂದ್ರು, ಶ್ಯಾಮ್, ರವಿ ಮತ್ತು ಎಲ್ಲಾ ಶಿಕ್ಷಕರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ