Thursday, November 19, 2026

ಪ್ರಾಯೋಗಿಕ ಆವೃತ್ತಿ

ಡಾಲರ್ಸ್ ಪೇಟೆ ಚಲನಚಿತ್ರ ಸೆ.6ರಂದು ಬಿಡುಗಡೆ

ಇದೇ ಸೆಪ್ಟೆಂಬರ್ 6ರಂದು ಮಂಡ್ಯದ ಸಂಜಯ ಚಿತ್ರಮಂದಿರ ಸೇರಿದಂತೆ ಕರ್ನಾಟಕ ರಾಜ್ಯಾದ್ಯಂತ ಡಾಲರ್ಸ್ ಪೇಟೆ ಚಲನಚಿತ್ರ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯದ ಖ್ಯಾತ ಲೆಕ್ಕ ಪರಿಶೋಧಕ ಸುನಿಲ್ ಅವರ ಪುತ್ರ ಎಸ್ ಕುಶಾಲ್ ಅವರು ಈ ಚಲನಚಿತ್ರದಲ್ಲಿ ಪ್ರಮುಖ ಪಾತ್ರಧಾರಿಯಾಗಿ ನಟಿಸಿದ್ದಾರೆ ಎಂದರು.

ಕುಶಾಲ್ ಅವರು ಇಂಜಿನಿಯರಿಂಗ್ ಪದವಿ ಮುಗಿಸಿ ಬೆಂಗಳೂರಿನಲ್ಲಿ ಸಿನಿಮಾ ಪ್ರಯಾಣ ಆರಂಭಿಸಿದ್ದಾರೆ. ಹಲವಾರು ಸಿನಿಮಾಗಳಲ್ಲಿ ಜೂನಿಯರ್ ಕಲಾವಿದರಾಗಿ ಆಗಿ ಕೆಲಸ ಮಾಡಿದ್ದಾರೆ. ಜಿಮ್ನಾಸ್ಟಿಕ್ ತರಬೇತಿಯನ್ನು ಪಡೆದು ದಸರಾ ಕ್ರೀಡಾಕೂಟದಲ್ಲಿ ಪದಕ ಗಳಿಸಿದ್ದಾರೆ ಎಂದರು .

ವರನಟ ಡಾ.ರಾಜ್ ಕುಮಾರ್ ಅವರ ಪುತ್ರ ಪುನೀತ್ ರಾಜಕುಮಾರ್ ಅವರ ಜೇಮ್ಸ್ ಸಿನಿಮಾದಲ್ಲಿ ಫೈಟರ್ ಆಗಿ ,ನಂತರ ಮದಗಜ ಸಿನಿಮಾದಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಅನುಭವ ಪಡೆದಿದ್ದಾರೆ. ಈಗ ಡಾಲರ್ಸ್ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಅವರು ಆದ ಕಾರಣ ಮಂಡ್ಯದ ಈ ಪ್ರತಿಭೆಯನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಚಲನಚಿತ್ರದ ನಾಯಕ ನಟ ಕುಶಾಲ್, ಅವರ ತಂದೆ ಸುನಿಲ್, ಕಾಂಗ್ರೆಸ್ ಮುಖಂಡ ನಾಗೇಂದ್ರ, ವೆಂಕಟೇಶ್, ಉಮ್ಮಡಹಳ್ಳಿ ನಾಗೇಶ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ