ಶ್ರೀರಂಗಪಟ್ಟಣ ತಾಲೂಕಿನ ಗ್ರಾಮ ನೆಲಮನೆ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ನೆಲಮನೆ ಗ್ರಾಮದ ಶಾಂತಮ್ಮ (45) ಮೃತಪಟ್ಟ ಮಹಿಳೆಯಾಗಿದ್ಧಾರೆ.
ಗ್ರಾಮದ ಬಳಿ ಹರಿಯುವ ವಿಶ್ವೇಶ್ವರಯ್ಯ ನಾಲೆಯ ವಿತರಣಾ ನಾಲೆಯಲ್ಲಿ ಪಾತ್ರೆ ತೊಳೆಯುತ್ತಿದ್ದ ಶಾಂತಮ್ಮ
ಅವರ ಮೇಲೆ ಬಾಬು ಎಂಬುವರ ಮನೆಯ ಗೋಡೆ ಕುಸಿದು ಬಿದ್ದಿದೆ, 6 ಅಡಿ ಎತ್ತರದ, 20 ಅಡಿ ಉದ್ದದ ಗೋಡೆ ದಿಢೀರ್ ಕುಸಿತವಾಗಿ ಈ ದುರ್ಘಟನೆ ಸಂಭವಿಸಿದೆ. ಗೋಡೆಯ ಅವಶೇಷಗಳ ಅಡಿ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಕಂದಾಯ ನಿರೀಕ್ಷಕ ಭಾಸ್ಕರ್, ಗ್ರಾಮಾಡಳಿತ ಅಧಿಕಾರಿ ಸುಹಾಸ್ ಭೇಟಿ ಪರಿಶೀಲನೆ ನಡೆಸಿದರು. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.