Friday, November 20, 2026

ಪ್ರಾಯೋಗಿಕ ಆವೃತ್ತಿ

ನಾಡಪ್ರಭು ಕೆಂಪೇಗೌಡ ಪುತ್ಥಳಿ ಅನಾವರಣ : ಮಂಜುನಾಥ್

ನಾಡಪ್ರಭು ಕೆಂಪೇಗೌಡ ಯುವಕರ ಸಂಘದ ವತಿಯಿಂದ ಸೆ.15ರಂದು ಬೆಳಿಗ್ಗೆ 11.30ಕ್ಕೆ ಮಳವಳ್ಳಿ ತಾಲ್ಲೂಕಿನ ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ವಿಶ್ವೇಶ್ವರಯ್ಯ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ ಹಾಗೂ ಕೆಂಪೇಗೌಡ ಜಯಂತೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸೇನೆ ಕರ್ನಾಟಕದ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ಹೇಳಿದರು.

ಗ್ರಾಮದಲ್ಲಿ ಕೃಷ್ಣಶಿಲೆಯಿಂದ ಸುಮಾರು 3.15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ 8 ಎತ್ತರದ ಕೆಂಪೇಗೌಡರ ಪುತ್ತಳಿಯನ್ನು ಅನಾವರಣ ಮಾಡಲಾಗುತ್ತಿದೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಸ್ಪಟಿಕಪುರಿ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶಾಖಾಮಠದ ಪೀಠಾಧ್ಯಕ್ಷ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಬೆಳಿಗ್ಗೆ 10.30ಕ್ಕೆ ಗ್ರಾಮದ ವಿವೇಕಾನಂದ ಪ್ರೌಢಶಾಲೆ ಮುಂಭಾಗದಿಂದ ವೃತ್ತದವರೆಗೂ ವಿವಿಧ ಕಲಾತಂಡಗಳೊಂದಿಗೆ ಸ್ವಾಮೀಜಿಗಳ ಮೆರವಣಿಗೆ ನಡೆಯಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ತಳಿ ಅನಾವರಣ ಮಾಡುವರು. ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್ ಪುಷ್ಪಾರ್ಚನೆ ಮಾಡಲಿದ್ದು, ಎಲ್ಲ ಸ್ವಾಮೀಜಿಗಳನ್ನು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಸನ್ಮಾನಿಸುವರು. ಕೆಂಪೇಗೌಡರ ಕುರಿತು ಭಾರತ ಜ್ಞಾನಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ಡಾ.ತಲಕಾಡು ಚಿಕ್ಕರಂಗೇಗೌಡ ಪ್ರಧಾನ ಭಾಷಣ ಮಾಡುವರು ಎಂದರು.

ಪುತ್ತಳಿ ಮಂಟಪದ ದಾನಿಗಳಾದ ಮಂಗಳಗೌರಮ್ಮ ಕರಿಯಪ್ಪ ಉಪಸ್ಥಿತಿ ವಹಿಸುವರು. ಮುಖ್ಯ ಅತಿಥಿಗಳಾಗಿ ಬೆಂಗಳೂರು ದಕ್ಷಿಣ ಸಂಸದ ಡಾ.ಮಂಜುನಾಥ್, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್‌ಬಂಡಿಸಿದ್ದೇಗೌಡ, ಪಿ.ರವಿಕುಮಾರ್‌ಗೌಡ ಗಣಿಗ, ಮಧು ಜಿ.ಮಾದೇಗೌಡ, ಜಿ.ಡಿ.ಹರೀಶ್‌ಗೌಡ, ವಿವೇಕಾನಂದ, ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ, ಡಿ.ಸಿ.ತಮ್ಮಣ್ಣ, ಮರಿತಿಬ್ಬೇಗೌಡ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರು, ಬಿಜೆಪಿ ಮುಖಂಡ ಜಿ.ಮುನಿರಾಜು, ರಾಜ್ಯ ಒಕ್ಕಲಿಗರ ಸಂಘದ ಉಮಾಪತಿಗೌಡ, ರಾಘವೇಂದ್ರ ಸೇರಿದಂತೆ ಮತ್ತಿತರರು ಭಾಗವಹಿಸುವರು. ಗಾಯಕ ಶಿವಾರ ಉಮೇಶ್ ಅವರಿಂದ ಸಂಜೆವರೆಗೂ ಗೀತಗಾಯನ ನಡೆಯಲಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಸಂಘದ ಸದಸ್ಯರಾದ ಕೆ. ಸ್ವಾಮಿಗೌಡ, ಸೋಮಣ್ಣ, ಎಚ್.ಎಂ.ಕೃಷ್ಣಮೂರ್ತಿ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ