Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ.ಎಸ್.ಕುಮಾರ್ ನಿಧನ

ಮಂಡ್ಯ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ನಗರದ ಗುತ್ತಲು ನಿವಾಸಿ ಕೆ.ಎಸ್.ಕುಮಾರ್(63) ಅವರು ಬುಧವಾರ ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನಲೆಯಲ್ಲಿ ಮೈಸೂರಿನ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದ ಕುಮಾರ್ ಅವರು ಚಿಕಿತ್ಸೆ ಫಲಿಸದೆ ಬುಧವಾರ ಮಧ್ಯಾಹ್ನ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.

ಮೃತರಿಗೆ ಪತ್ನಿ ಗಿರಿಜಾ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಮೃತರ ಅಂತ್ಯಕ್ರಿಯೆಯು ಮಂಡ್ಯನಗರದ ಮೈಶುಗರ್ ಟೌನ್ ರಸ್ತೆಯಲ್ಲಿನ ರುದ್ರಭೂಮಿಯಲ್ಲಿ ಸೆ.12ರಂದು ಬೆಳಗ್ಗೆ 11ಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ