Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೃಷಿಕನ ಬದುಕು ಉತ್ತಮವಾಗಬೇಕಾದರೆ ಅಭಿವೃದ್ದಿ ಪರ ಚಿಂತನೆ ಅಗತ್ಯ: ನರೇಂದ್ರಸ್ವಾಮಿ

ಸಹಕಾರ ಕ್ಷೇತ್ರದಿಂದ ಕೃಷಿಕನ ಬದುಕು ಉತ್ತಮವಾಗಬೇಕು ಎಂದರೇ ಎಲ್ಲರೂ ಒಗ್ಗಟ್ಟಾಗಿ ಅಭಿವೃದ್ಧಿ ಪರವಾಗಿ ಚಿಂತನೆ ಮಾಡಿದಾಗ ಮಾತ್ರ ಸಾಧ್ಯ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.

ಮಳವಳ್ಳಿ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಹಾಗೂ ಸಾಮಾನ್ಯ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು‌, ಸಹಕಾರಿಗಳೇ ಸೇರಿ ತಮ್ಮ ಅಭಿವೃದ್ಧಿಯನ್ನು ತಾವೇ ಮಾಡಿಕೊಳ್ಳುವ ಕ್ಷೇತ್ರ ಸಹಕಾರಿ ಕ್ಷೇತ್ರ, ಸಹಕಾರಿ ಕ್ಷೇತ್ರದಲ್ಲಿ ಚುನಾಯಿತ ಪ್ರತಿನಿಧಿಗಳು ಅಭಿವೃದ್ಧಿ ಪರವಾದ ಚಿಂತನೆ ಮಾಡಿದಾಗ ಮಾತ್ರ ಅಭಿವೃದ್ಧಿ ಸಾಧ್ಯ, ಅಭಿವೃದ್ಧಿ ಕ್ಷೇತ್ರದಲ್ಲಿ ಒಗ್ಗಟ್ಟು ಇದ್ದಾಗ ಮಾತ್ರ ಅಭಿವೃದ್ಧಿ ಸಾಧ್ಯ, ಇಲ್ಲಿ ಬಂದಿರುವ ಎಲ್ಲಾ ಷೇರುದಾರರು ಒಗ್ಗಟ್ಟಾಗಿ ಸಂಘದ ಬೆಳವಣಿಗೆ ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಕೆ.ಎಂ.ವೆಂಕಟೇಗೌಡ, ಉಪಾಧ್ಯಕ್ಷ ಚಂದ್ರ, ಗ್ರಾ.ಪಂ.ಉಪಾದ್ಯಕ್ಷ ಮನುರಾಜೇ ಅರಸ್, ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಉಮೇಶ್, ಸಿಇಒ ಶ್ರೀ ವೀರಪ್ಪ ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!