Thursday, November 19, 2026

ಪ್ರಾಯೋಗಿಕ ಆವೃತ್ತಿ

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆ.21ರ ಬಳಿಕ ಮಳೆ

ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 21ರ ಬಳಿಕ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗದಲ್ಲಿ ಒಣಹವೆ ಇರಲಿದೆ. ಕಾರವಾರ, ಶಿರಾಲಿ, ಸಿದ್ದಾಪುರ, ಕುಮಟಾ, ಕುಂದಾಪುರ, ಮಂಕಿ, ಗೋಕರ್ಣ, ತರೀಕೆರೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್‌ಎಎಲ್‌ ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್‌ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ