Thursday, September 19, 2024

ಪ್ರಾಯೋಗಿಕ ಆವೃತ್ತಿ

ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣ| ರಾಜ್ಯ ಸರ್ಕಾರ, ಲೋಕಾಯುಕ್ತಕ್ಕೆ ‘ಸುಪ್ರೀಂ’ ನೋಟಿಸ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಡಿಸಿಎಂ ಡಿಕೆ ಶಿವಕುಮಾರ್​‌, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ ನೋಟಿಸ್​ ನೀಡಿ ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29 ರಂದು ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂಕೋರ್ಟ್‌ ತೀರ್ಮಾನಿಸಲಿ ಎಂದು ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಯತ್ನಾಳ್‌ ಸುಪ್ರೀಂ ಕೋರ್ಟ್‌ ನಲ್ಲಿ ಪ್ರಶ್ನಿಸಿದ್ದರು.

ಸುಪ್ರೀಂಕೋರ್ಟ್ ​ಇಂದು ಅರ್ಜಿ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಪ್ರತಿವಾದ ಮಂಡಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತಕ್ಕೆ ನೋಟಿಸ್​ ಜಾರಿ ಮಾಡಿ, ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!