Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮೈಕ್ರೋ ಫೈನಾನ್ಸ್ ಗಳ ಕಿರುಕುಳ: ನೇಣಿನ ಕುಣಿಕೆಯೊಂದಿಗೆ ಮಹಿಳೆಯರ ಪ್ರತಿಭಟನೆ

ಸಾಲ ವಸೂಲಿಗಾಗಿ ಮೈಕ್ರೋ ಫೈನಾನ್ಸ್ ಹಾಗೂ ಹಲವು ಬ್ಯಾಂಕುಗಳ ಪ್ರತಿನಿಧಿಗಳು ನಿರಂತರ ಕಿರುಕುಳ ನೀಡುತ್ತಿದ್ದು, ಇದನ್ನು ತಪ್ಪಿಸಿ ಸಾಲ ಮರು ಪಾವತಿಸಲು ಹೆಚ್ಚಿನ ಸಮಯಾವಕಾಶ ನೀಡುವಂತೆ ಆಗ್ರಹಿಸಿ ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದಲ್ಲಿ 30ಕ್ಕೂ ಸ್ತ್ರೀ ಶಕ್ತಿ ಸಂಘಟನೆಗಳ ಮಹಿಳೆಯರು ಗ್ರಾಮ ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಹೊಳಲು ಗ್ರಾಮದ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಇದೇ ರೀತಿ 30ಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್ ಕಂಪನಿಗಳು ಹಾಗೂ ಬ್ಯಾಂಕುಗಳಿಂದ ಸಾಲ ಪಡೆದಿದ್ದು, ಆ ಸಾಲವನ್ನು ಮರು ಪಾವತಿ ಮಾಡಲು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿವೆ ಎಂದು ತಿಳಿದು ಬಂದಿದೆ, ಈ ಪೈಕಿ ಹಲವರು ಮರ್ಯಾದೆಗೆ ಅಂಜಿ ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ, ಆದರೆ ಮೈಕ್ರೋ ಫೈನಾನ್ಸ್ ಗಳ ಕಿರುಕುಳದಿಂದ ತೀವ್ರವಾಗಿ ನೊಂದಿರುವ ಮಹಿಳೆಯರು ಪ್ರತಿಭಟನೆಯ ಹಾದಿ ಹಿಡಿದಿದ್ಧಾರೆ.

nudikarnataka.com

ಕೆಲವು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಪ್ರತಿವಾರ ನಿಗದಿತ ದಿನದಂದು ಸಾಲದ ಕಂತುಗಳನ್ನು ಪಾವತಿ ಮಾಡಬೇಕಿದ್ದು, ಹಣ ಹೊಂದಿಸಲು ಸಾಧ್ಯವಾಗದಿದ್ದಲ್ಲಿ, ಆ ಕಂಪನಿಗಳ ಪ್ರತಿನಿಧಿಗಳು ಮನೆಯ ಮುಂದೆಯೇ ಬಂದು ಕುಳಿತು, ಹಣ ಪಾವತಿಸುವಂತೆ ದಬಾಯಿಸುವ ಮೂಲಕ ಮಾನಸಿಕ ಕಿರುಕುಳ ನೀಡುತ್ತಿದ್ಧಾರೆ. ಇದರಿಂದ ನಮಗೆ ಮುಕ್ತಿ ನೀಡಬೇಕು, ಸಾಲ ಪಾವತಿಸಲು ಹೆಚ್ಚಿನ ಸಮಯಾವಕಾಶ ನೀಡಬೇಕೆಂದು ಆಗ್ರಹಿಸಿದರು.

ಕೆಲವರಿಗೆ ಹಣದ ಅವಶ್ಯಕತೆ ಇಲ್ಲದಿದ್ದರೂ, ಅವರೇ ಮೇಲೆ ಬಿದ್ದು ಒತ್ತಡ ಹೇರಿ ಸಾಲ ನೀಡುತ್ತಿದ್ದಾರೆ.  ಆನಂತರ ಪ್ರತಿವಾರ ಸಾಲದ ಕಂತನ್ನು ಕಟ್ಟುವಂತೆ ಮನೆ ಬಳಿ ಬಂದು ಕಿರುಕುಳ ನೀಡುತ್ತಿದ್ದಾರೆ, ಅನಕ್ಷರಸ್ಥ ಮಹಿಳೆಯರ ಮುಗ್ಧತೆಯನ್ನು ಬಳಸಿಕೊಂಡು ಮಹಿಳೆಯರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಹಿಳೆಯರು ಆಕ್ರೋಶ ಹೊರ ಹಾಕಿದರು.

ಪ್ರತಿಭಟನೆಯಲ್ಲಿ ಲಕ್ಷ್ಮಿ, ಪುಟ್ಟಚನ್ನಮ್ಮ, ಚಿಕ್ಕತಾಯಿ, ಭಾಗ್ಯ, ನಂಜಮ್ಮ, ಸೌಮ್ಯ, ನಂದಿನಿ, ರೇಣುಕಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!