Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮಹಿಳೆಯರ ಮೇಲಿನ ಅತ್ಯಾಚಾರ, ಲೈಂಗಿಕ ಕಿರುಕುಳ ಖಂಡಿಸಿ ಪ್ರತಿಭಟನೆ

ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳನ್ನು ಖಂಡಿಸಿ ಮಹಿಳೋದಯ ಮಹಿಳಾ ಒಕ್ಕೂಟದಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.

ದೇಶದ ಉದ್ದಗಲಕ್ಕೂ ಪ್ರತೀ ದಿನ ಪ್ರತೀ ಕ್ಷಣ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳ ಅಂಕಿ ಅಂಶಗಳು ಹೆಚ್ಚುತ್ತಲೇ ಇದೆ. ಇದೊಂದು ಅಘಾತಕಾರಿ ವಿಷಯ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಆಯೋಗದ ಮೂಲಕ ಮಹಿಳೆಯರ ರಕ್ಷಣೆಗಾಗಿ ಹಲವಾರು ಕಾರ್ಯಗಳ ಮೂಲಕ ಯೋಜನೆಗಳನ್ನು ರೂಪಿಸಿದ್ದರೂ ಕಾರ್ಯ ನಿರ್ವಹಣೆಯಲ್ಲಿ ವಿಫಲತೆ ಕಂಡು ಬಂದಿದೆ ಎಂದು ಪ್ರತಿಭಟನಾಕಾರರು ದೂರಿದರು.

ಕೆಲ ದಿನಗಳ ಹಿಂದೆ, ಪಶ್ಚಿಮ ಬಂಗಾಲ ರಾಜ್ಯದ ಕೊಲ್ಕತ್ತಾದಲ್ಲಿನ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಗಸ್ಟ್ 9 ರಂದು ರಾತ್ರಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೈದಿರುವುದು ನಾಗರಿಕ ಸಮಾಜಕ್ಕೆ ನಾಚಿಕೆ ಗೇಡಿನ ಸಂಗತಿಯಾಗಿದೆ. ಅದರಲ್ಲೂ 24 X 7 ಜನ ಸೇವೆ ಮಾಡುತ್ತಿರುವ ವೇಳೆಯಲ್ಲಿ ವೈದ್ಯರ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವುದು ಖಂಡನೀಯ, ಅದೇ ರೀತಿಯಲ್ಲಿ ಉತ್ತರಾಖಂಡದ ಡೆಹ್ರಾಡೂನ್ ಬಸ್ ನಿಲ್ದಾಣದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು, ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಇಂತದೇ ಹತ್ತು ಹಲವಾರು ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಮಹಿಳೋದಯ ಮಹಿಳಾ ಒಕ್ಕೂಟ ಹಕ್ಕೋತ್ತಾಯ

  • ಕೊಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆವೆಸಗಿದ ಅರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಮರಣ ದಂಡನೆ ವಿಧಿಸುವುದು.
  • ಮಹಿಳೆಯರ ಮೇಲಿನ ಹೀನಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಉದ್ಯೋಗ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷತೆಯ ವಾತವರಣ ನಿರ್ಮಿಸುವುದು
  • ಎಲ್ಲಾ ಹೆಣ್ಣುಮಕ್ಕಳ ವಸತಿ ನಿಲಯಗಳ ಬಳಿ ಸೂಕ್ತ ಭದ್ರತೆ ನೀಡುವುದು.
  • ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳ ಕುರಿತು ರಾಜ್ಯ / ಕೇಂದ್ರ ಸರಕಾರಗಳು ಅತ್ಯಂತ ತುರ್ತಾಗಿ ಕ್ರಮ ಕೈಗೊಳ್ಳುವುದು.
  • ಕೋರ್ಟ್‌ಗಳಲ್ಲಿ ಮಹಿಳೆಯರ ಮೇಲಿನ ಪ್ರಕರಣಗಳು ತ್ವರಿತವಾಗಿ ವಿಲೇವಾರಿ ಮಾಡುವುದು ಮತ್ತು ತಪ್ಪಿತಸ್ತರಿಗೆ ಶಿಕ್ಷೆ ನೀಡುವುದು
  • ಮಹಿಳೆಯರು ನಿರ್ಭೀತಿಯಿಂದ ಜೀವಿಸಲು ತಳಮಟ್ಟದಿಂದ ರಾಷ್ಟ್ರಮಟ್ಟದವರೆಗೂ ಕಾನೂನು ರೀತಿಯಲ್ಲಿ ಸೂಕ್ತ ರಕ್ಷಣೆ ನೀಡುವುದು.
  • ಅತ್ಯಾಚಾರಿಗಳಿಗೆ ವಿಧಿಸುವ ಶಿಕ್ಷೆಯನ್ನು ಕಠಿಣಗೊಳಿಸಬೇಕು. ಈಗಿರುವ ಶಿಕ್ಷೆಯ ವಿಧಾನವನ್ನು ಬದಲಿಸಬೇಕು ಮತ್ತು ಅತೀ ಶೀಘ್ರದಲ್ಲಿ ತೀರ್ಪು ನೀಡಿ ಅತ್ಯಾಚಾರಿಗಳನ್ನು ಮಟ್ಟ ಹಾಕಬೇಕು. ಇದು ನಾಗರೀಕ ಸಮಾಜದಲ್ಲಿರುವ ಇತರ ವಿಕೃತ ಪುರುಷರಿಗೆ ಪಾಠವಾಗಬೇಕು.
  • ಸ್ಥಳೀಯ ಶಾಸಕರು ಮತ್ತು ಸಂಸದರು ತಮ್ಮ ಸಭೆಗಳಲ್ಲಿ ಮಹಿಳಾ ದೌಜನ್ಯವನ್ನು ತಡೆಗಟ್ಟಲು ಧ್ವನಿ ಎತ್ತುವುದು ಮತ್ತು ರಕ್ಷಣೆಗೆ ಬೇಕಾದಂತ ಅಗತ್ಯ ಕ್ರಮಗಳ ಬಗ್ಗೆ ಗಮನಹರಿಸುವುದು.
  • ಮಹಿಳೆಯರಿಗೆ ಎಲ್ಲಾ ರೀತಿಯ ಸೂಕ್ತ ರಕ್ಷಣೆ ನೀಡುವುದು
  • ಭ್ರೂಣ ಲಿಂಗ ಪತ್ತೆಯನ್ನು ನಿಲ್ಲಿಸಬೇಕು
  •  ಹೆಣ್ಣು ಭ್ರೂಣ ಹತ್ಯೆ ಮಾಡುವವರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮೋಲಿ ಪುಡಾದೋ, ಭಾರತಿ, ಉಮಾ, ಶ್ರುತಿ, ಸಾಕಮ್ಮ, ವರಲಕ್ಷ್ಮಿ ಹಾಗೂ ವಿದ್ಯಾವತಿ ಸೇರಿದಂತೆ ಹಲವು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ