Friday, September 20, 2024

ಪ್ರಾಯೋಗಿಕ ಆವೃತ್ತಿ

ಮುನಿರತ್ನ ಪ್ರಕರಣ ತನಿಖೆಗೆ ಎಸ್‌ಐಟಿ ರಚಿಸಿ ; ಒಕ್ಕಲಿಗ ನಾಯಕರಿಂದ ಸಿಎಂಗೆ ಮನವಿ

ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಇಂದು (ಸೆ.20) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ವಿರುದ್ದದ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಮನವಿ ಸಲ್ಲಿಸಿದೆ.

ನಿಯೋಗದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್, ಶಾಸಕರಾದ ರಂಗನಾಥ್, ಶರತ್ ಬಚ್ಚೇಗೌಡ, ಪುಟ್ಟಣ್ಣ, ಮರಿತಿಬ್ಬೇಗೌಡ ಸೇರಿದಂತೆ ಹಲವರು ಇದ್ದರು.

ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಶಾಸಕ ಮುನಿರತ್ನ ಅವರಿಗೆ ನ್ಯಾಯಾಲಯ ನಿನ್ನೆ ಷರತ್ತುಬದ್ದ ಜಾಮೀನು ನೀಡಿತ್ತು. ಈ ಹಿನ್ನೆಲೆ ಇಂದು ಮುನಿರತ್ನ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಅಷ್ಟರಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!