Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅಪಘಾತದ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಮಧು ಮಾದೇಗೌಡ

ಮದ್ದೂರು ತಾಲ್ಲೂಕು ಮಣಿಗೆರೆ ಗ್ರಾಮದ ಸಮೀಪ ಕಾರು-ಗೂಡ್ಸ್ ಟೆಂಪೊ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಶುಕ್ರವಾರ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ಭೇಟಿ ಮಾಡಿದರು.

ಮಿಮ್ಸ್ ನಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಅವರು, ಧೈರ್ಯದಿಂದ ಇರುವಂತೆ ಸಂತ್ರಸ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ಆತ್ಮವಿಶ್ವಾಸ ತುಂಬಿದರು.

ಅಲ್ಲದೆ, ಗಾಯಾಳುಗಳಿಗೆ ನೀಡುತ್ತಿರುವ ಚಿಕಿತ್ಸೆಯ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು, ನುರಿತ ವೈದ್ಯರ ಮೇಲ್ವಿಚಾರಣೆಯಲ್ಲಿ ಎಲ್ಲರಿಗೂ ಆದ್ಯತೆಯ ಮೇಲೆ ಸೂಕ್ತ ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಗಾಯಾಳುಗಳು ಮತ್ತು ಅವರ ಕುಟುಂಬದ ಸದಸ್ಯರು ಧೃತಿಗೆಡಬಾರದು. ಸರ್ಕಾರ ತಮ್ಮೊಂದಿಗೆ ಇರಲಿದೆ ಎಂದು ಹೇಳಿದರು.

ಮದ್ದೂರು ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಭರತೇಶ್, ಬಿ.ಗಿರೀಶ್, ಮುಖಂಡರಾದ ಅಪ್ಪಾಜಿ ಮುಡೀನಹಳ್ಳಿ, ಅಣ್ಣುರು ಸಿದ್ದಪ್ಪ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!